

ಖಾನಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ವರ್ಷದಿಂದ ಪಟ್ಟನದ ಶಾಂತಿನಿಕೇತನ ಪಬ್ಲಿಕ್ ಶಾಲೆಯ ಕಟ್ಟಡದಲ್ಲಿ ಬಿಬಿಎ ಮತ್ತು ಬಿಸಿಎ ಕಾಲೇಜು ಆರಂಭಿಸಲಾಗುತ್ತಿದೆ ಎಂದು ಮಹಾಲಕ್ಷ್ಮೀ ಶಿಕ್ಷಣ ಸಂಘದ ಸ್ಥಾಪಕ ಅಧ್ಯಕ್ಷ, ಶಾಸಕ ವಿಠ್ಠಲ ಹಲಗೇಕರ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿ ಮಾತನಾಡಿ, ಮಹಾಲಕ್ಷ್ಮೀ ಎಜುಕೇಷನ್ ಸೊಸೈಟಿ ಎಲ್‌ಕೆಜಿ, ಯುಕೆಜಿ, ಸಿಬಿಎಸ್‌ಸಿ ಮಾಧ್ಯಮಿಕ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಿ ಆಧುನಿಕ ಶಿಕ್ಷಣ ವಿಧಾನಗಳ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನಿಸಿದ್ದೇವೆ ಎಂದರು.
ಶಾಂತಿನಿಕೇತನ ಪಬ್ಲಿಕ್ ಶಾಲೆ ತಾಲೂಕಿನಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಯಾಗಿದೆ. ಶಾಸಕರಾಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿವಿಧ ಕೋರ್ಸ್ ಪ್ರಾರಂಭಿಸಲು ಪ್ರಯತ್ನಿಸುತ್ತಿದ್ದೇವೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರೊ.ಬಂಡು ಮಂಜುಕರ, ಆರ್.ವೈ.ಪಾಟೀಲ, ತಾಲೂಕಿನಲ್ಲಿ ಹೊಸ ಶಿಕ್ಷಣದ ಅಗತ್ಯತೆ ಮತ್ತು ಶಾಂತಿನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಕೈಗೊಂಡಿರುವ ವಿವಿಧ ಉಪಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಾಂತಿನಿಕೇತನ ಪಬ್ಲಿಕ್ ಶಾಲೆ ಅಧ್ಯಕ್ಷ ಪ್ರೊ.ಬಂಡು ಮಜುಕರ, ಕಾರ್ಯದರ್ಶಿ ಆರ್.ಎಸ್.ಪಾಟೀಲ ಇತರರಿದ್ದರು.