ರಾಜಧಾನಿಯಲ್ಲಿ ಶೇ.94 ಕೋವಿಡ್ ಗುಣಮುಖರು : 942 ಮಂದಿ ಗುಣಮುಖ, 9 ಸಾವು

corona images
Published on

ಬೆಂಗಳೂರು : ರಾಜಧಾನಿಯಲ್ಲಿ ಮಂಗಳವಾರ 942 ಮಂದಿ ಸೋಂಕಮುಕ್ತರಾಗುವ ಮೂಲಕ ಒಟ್ಟು ಗುಣಮುಖರ ಸಂಖ್ಯೆ 3,36,880ಕ್ಕೆ ತಲುಪಿದೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ.94ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಮಂಗಳವಾರ 729 ಮಂದಿಗೆ ಹೊಸದಾಗಿ ಕೋವಿಡ್ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,58,606ಕ್ಕೆ ಮುಟ್ಟಿದೆ. ಇನ್ನು ಕರೊನಾ ನಿಗದಿತ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ ಮತ್ತು ಮನೆ ನಿಗಾದಲ್ಲಿ 17,707 ಕರೊನಾ ಸಕ್ರಿಯ ಪ್ರಕರಣಗಳಿದ್ದಾರೆ. ಇದರಲ್ಲಿ 338 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿಗೆ 9 ಮಂದಿ ಬಲಿಯಾಗಿದ್ದು, ಒಟ್ಟು ಸೋಂಕಿನಿಂದ ಮೃತರಾದವರ ಸಂಖ್ಯೆ 4,018ಕ್ಕೆ ಏರಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net