ವೋಟ್-ಎ-ಥಾನ್ ಸ್ಪರ್ಧೆ: ಮತದಾನ ಜಾಗೃತಿ ಮೂಡಿಸಿ, ಬಹುಮಾನ ಗೆಲ್ಲಿ..

BBMP election awareness
Published on

ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸಲು ಆರಂಭಿಸಿರುವ ವಿನೂತನ ವೋಟ್-ಎ-ಥಾನ್ ಸ್ಪರ್ಧೆ ಏ.30ರ ವರೆಗೆ ನಗರದ ಎಲ್ಲ ವಿಧಾನಸಭಾ ಚನಾವಣಾ ಕ್ಷೇತ್ರಗಳಲ್ಲಿ ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಚುನಾವಣೆ ಕುರಿತು ರೀಲ್ಸ್, ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್ ಮಾಡುವ ವೋಟ್-ಎ- ಥಾನ್ ಸ್ಪರ್ಧೆಗೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಚಾಲನೆ ನೀಡಿ ಮಾತನಾಡಿದರು.

ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಹಾಗೂ ಪಾಲಿಕೆಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈಗ ಮತ್ತೊಂದು ವಿನೂತನ ಸ್ಪರ್ಧೆ ನಡೆಸಲಾಗುತ್ತಿದೆ. ಸ್ಪರ್ಧೆಯಲ್ಲಿ ಕ್ರಿಯಾತ್ಮಕ ಆಲೋಚನೆಗಳ ಮೂಲಕ ಟ್ಯಾಗ್ ಬಳಸಿ ರೀಲ್ಸ್, ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್ contact-us@bbmp.gov.in ಮೇಲ್ ಐಡಿಗೆ ಏ.30 ರೊಳಗಾಗಿ ಕಳುಹಿಸಬೇಕು ಎಂದರು.

ಅತ್ಯುತ್ತಮ ರೀಲ್ಸ್, ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್​ಗೆ ನಗದು ಬಹುಮಾನ, ಪ್ರಮಾಣಪತ್ರ ಸೇರಿ ಇತ್ಯಾದಿ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುವುದು. ಈ ಸ್ಪರ್ಧೆ ಮೂಲಕ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದು, ಮತದಾರರಲ್ಲಿ ಉತ್ಸಾಹ ಮೂಡಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net