ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ನೌಕರ ಆತ್ಮಹತ್ಯೆ

RAKESH bbmp
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಜಂಟಿ ಆಯುಕ್ತರ ಕಚೇರಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಕೇಶ್ (36) ಎನ್ನುವ ಯುವಕ ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ವಿಜಯನಗರದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಾಕೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪೂರ್ವ ವಲಯದ ಜಂಟಿ ಆಯುಕ್ತೆ ಪಲ್ಲವಿ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಕೇಶ್ ಕೆಲಸ ಒತ್ತಡದ ಬಗ್ಗೆ ಅಳಲು ತೋಡಿಕೊಂಡಿದ್ದರು ಎನ್ನಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net