ಕಾಮಗಾರಿ ಆರಂಭಿಸದ ಗುತ್ತಿಗೆದಾರರಿಬ್ಬರಿಗೆ ದಂಡ ವಿಧಿಸಿದ ಬಿಬಿಎಂಪಿ

bbmp office
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ಹಾಗೂ ಪಶ್ವಿಮ ವಲಯದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸದೆ ವಿಳಂಬ ಮಾಡುತ್ತಿರುವ ಇಬ್ಬರು ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ.

ದಕ್ಷಿಣ ವಲಯದ ವಿಜಯನಗರ ವಿಧಾನಸಭಾ ಕ್ಷೇತ್ರದ ವೆಸ್ಟ್ ಆ್ ಕಾರ್ಡ್ ರಸ್ತೆ ಹಾಗೂ ಹೊಸಕೆರೆಹಳ್ಳಿ ಮುಖ್ಯರಸ್ತೆಯಲ್ಲಿ ಮೆ. ಜೆಎಂಸಿ ನಿರ್ಮಾಣ ಕಂಪನಿಯು ಕಾಮಗಾರಿ ಪ್ರಾರಂಭಿಸದೇ ಇರುವುದರಿಂದ ಮತ್ತು ಸಾರ್ವಜನಿಕರಿಗೆ ಅನಾನುಕೂಲ ಉಂಟು ಮಾಡಿರುವ ಹಿನ್ನಲೆಯಲ್ಲಿ ಗುತ್ತಿಗೆ ಕರಾರಿನಂತೆ 5 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇದೇ ರೀತಿ ಪಶ್ಚಿಮ ವಲಯದಲ್ಲಿ ಮೆ. ಓಷಿಯನ್ ನಿರ್ಮಾಣ ಕಂಪನಿಯು ವೈಯಾಲಿಕಾವಲ್ ರಸ್ತೆಯಲ್ಲಿ ನಿಧಾನಗತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಿರ್ವಹಿಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿರುವ ಹಿನ್ನ 5 ಲಕ್ಷ ರೂ. ದಂಡವನ್ನು ಪಾಲಿಕೆಯು ವಿಧಿಸಿದೆ.

ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ಅವುಗಳನ್ನು ತ್ವರಿತಗತಿಯಲ್ಲಿ ಕಾಮಗಾರಿ ನಡೆಸದವರಿಗೆ ದಂಡ ವಿಧಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಬಿ.ಎಸ್.ಪ್ರಹ್ಲಾದ್‌ಗೆ ಸೂಚಿಸಿದ್ದರು. ಈ ಸೂಚನೆ ಆಧರಿಸಿ ಗುತ್ತಿಗೆ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಇತರ ಕಂಪನಿಯಗಳು ಕೆಲಸ ಮಾಡದಿದ್ದಲ್ಲಿ ಅವುಗಳಿಗೂ ದಂಡ ವಿಧಿಸುವುದಾಗಿ ಪಾಲಿಕೆ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net