ಬಿಬಿಎಂಪಿ ಘನತ್ಯಾಜ್ಯ ಇಂಧನ ಯೋಜನೆ: ಎಇಇ ನಿವಾಸ, ಕಚೇರಿ ಮೇಲೆ ಎಸಿಬಿ ದಾಳಿ

acb main
Published on

ಬೆಂಗಳೂರು: ಬಿಬಿಎಂಪಿಯ ಘನ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಯೋಜನೆಯಲ್ಲಿ ನಡೆದ ಅವ್ಯವಹಾರದ ಸಂಬಂಧ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ)ನ ನಿವಾಸ ಹಾಗೂ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ.

ಬಿಬಿಎಂಪಿ ಎಇಇ ರಾಘವೇಂದ್ರ ಅವರಿಗೆ ಸೇರಿದ ಜಯನಗರ 4ನೇ ಬ್ಲಾಕ್‌ನಲ್ಲಿರುವ ಕಚೇರಿ ಹಾಗೂ ಕೋಣನಕುಂಟೆಯಲ್ಲಿರುವ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿ ಮಹತ್ವದ ದಾಖಲೆ ಜಪ್ತಿ ಮಾಡಿದೆ. ಈ ಅವ್ಯವಹಾರದಲ್ಲಿ ರಾಘವೇಂದ್ರ ಭಾಗಿಯಾಗಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಎಸಿಬಿ ಅದಿಕಾರಿಗಳು ಇವರ ಮೇಲೆ ದಾಳಿ ನಡೆಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿರುವ ಎಸಿಬಿ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಷ್ಟು ಜನರ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಎಸಿಬಿ ಅಧಿಕಾರಿಗಳು ಈ ಹಿಂದೆ ಬಿಬಿಎಂಪಿ ಇಂಜಿನಿಯರ್‌ಗಳು ಹಾಗೂ ಕೆಲ ಖಾಸಗಿ ವ್ಯಕ್ತಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net