

ಕಲಬುರಗಿ: ಡಾ.ಬಿ.ಡಿ.ಜತ್ತಿ ಸಂಶೋಧನಾ ಪ್ರಶಸ್ತಿಗೆ ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿಯೂ ಆದ ನಿವೃತ್ತ ಐಎಎಸ್ ಅಧಿಕಾರಿ ಡಾ.ಶಿವಾನಂದ ಜಾಮದಾರ್ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹೇಳಿದರು. ಕಲಬುರಗಿಯ ಅನುಭವ ಮಂಟಪದಲ್ಲಿ ಸೆ.೧೧ರಂದು ಸಂಜೆ ೬ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇದೇ ವೇಳೆ ಬಸವ ಸಮಿತಿ ಸಂಸ್ಥಾಪಕರ ದಿನವೂ ಆಚರಿಸಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಾಮಾಜಿಕ, ಧಾರ್ಮಿಕ ಸೇವೆ, ಸಂಶೋಧನಾ ಪ್ರಕಟಣೆ ಪರಿಗಣಿಸಿ ಜಾಮದಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ಫಲಕ, ಸ್ಮರಣಿಕೆ, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದರು.