ಬಿಡಿಎ ಕಾರ್ಯಾಚರಣೆ: 35 ಕೋಟಿ ಮೌಲ್ಯದ ಆಸ್ತಿ ವಶ

bda site
Published on

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೇರೋಹಳ್ಳಿ ಗ್ರಾಮದಲ್ಲಿ ಸುಮಾರು 35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮರುವಶಕ್ಕೆ ಪಡಯುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿಯ ಹೇರೋಹಳ್ಳಿ ಗ್ರಾಮದ ಸರ್ವೆ ನಂಬರ್ 64ರಲ್ಲಿನ ಪ್ರಾಧಿಕಾರದ 32.45 ಗುಂಟೆ ಜಮೀನಿನಲ್ಲಿ ಸ್ಥಳೀಯರು ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ್ದ ಶೆಡ್, ಕಟ್ಟಡಗಳನ್ನು ತೆರವುಗೊಳಿಸಿ ಅಪೃ ಬೆಲೆಯ ಜಮೀನನ್ನು ಪ್ರಾಧಿಕಾರವು ತನ್ನ ವಶಕ್ಕೆ ತೆಗೆದುಕೊಂಡಿದೆ.

ಈ ಕಾರ್ಯಾಚರಣೆಯಲ್ಲಿ ಪ್ರಾಧಿಕಾರದ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್ ಹಾಗೂ ಆರಕ್ಷಕ ಉಪಾಧೀಕ್ಷಕ ಯು.ಡಿ. ಕೃಷ್ಣಕುಮಾರ್ ಮತ್ತು ಪೊಲೀಸ್ ಇನ್‌ಸ್ಪೆಕ್ಟರ್ ಟಿ. ಸಂಜೀವರಾಯಪ್ಪ ಒಳಗೊಂಡಂತೆ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net