ಬಿಡಿಸಿಸಿ ಪ್ರಗತಿಗೆ ಪ್ರಯತ್ನ

12Ckd1
Published on

ಚಿಕ್ಕೋಡಿ: ಹಿರಿಯರು ಕಟ್ಟಿ ಬೆಳೆಸಿದ ಬಿಡಿಸಿಸಿ ಬ್ಯಾಂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರೈತರ ಹಿತಾಸಕ್ತಿಗಾಗಿ ಹೊಸ ಯೋಜನೆ ಜಾರಿಗೆ ತಂದು ಸಹಕಾರ ಕ್ಷೇತ್ರ ಬಲಪಡಿಸುವುದೇ ನನ್ನ ಧ್ಯೇಯವಾಗಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ತಾಲೂಕಿನ ಯಕ್ಸಂಬಾ ಶ್ರೀ ಬೀರೇಶ್ವರ ಕಚೇರಿ ಆವರಣದಲ್ಲಿ ನೂತನವಾಗಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಹಾಗೂ ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರಿಂದ ಬುಧವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಶಾಸಕಿ ಶಶಿಕಲಾ ಜೊಲ್ಲೆ, ಎಣ್ಣೆ ಬೀಜ ಬೆಳೆಗಾರ ಸಂಘದ ನಿರ್ದೇಶಕ ದೀಪಕ ಪಾಟೀಲ ಸೇರಿ ಜಿಲ್ಲೆಯ ಸಹಕಾರಿ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net