

ಮೂಡಲಗಿ: ತಾಲೂಕಾಡಳಿತದಿಂದ ತಹಸೀಲ್ದಾರ್ ಮಹಾದೇವ ಸನಮುರಿ ನೇತತ್ವದಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ವೀರಜ್ಯೋತಿ ರಥಕ್ಕೆ ಪುರಸಭೆ ವ್ಯಾಪ್ತಿಯ ಗುರ್ಲಾಪುರದಲ್ಲಿ ಭಾನುವಾರ ವಾದ್ಯ ಮತ್ತು ಕುಂಭ ಮೇಳಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು.
ಗುರ್ಲಾಪುರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೋಳಿ ಮಾತನಾಡಿ, ರಾಯಣ್ಣ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಬ್ರಿಟಿಷರ ಸರ್ಕಾರ ನಡುಗಿಸಿದರು. ಯುವಕರು ರಾಯಣ್ಣನವರನ್ನು ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದರು.
ಬಿಇಒ ಅಜಿತ ಮನ್ನಿಕೇರಿ ಮಾತನಾಡಿ, ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಹೋರಾಟ ಮತ್ತು ವಿಚಾರಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ ಎಂದರು. ಮೂಡಲಗಿ ಪಟ್ಟಣದ ಕಲ್ಮೇಶ್ವರ ವತ್ತದಲ್ಲಿ ವೀರಜ್ಯೋತಿ ರಥಕ್ಕೆ ತಹಸೀಲ್ದಾರ್ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟರು.
ಸಿಡಿಪಿಒ ಯಲ್ಲಪ್ಪ ಗದಾಡಿ, ಸಿಪಿಐ ಶ್ರೀಶೈಲ್ ಬ್ಯಾಕೂಡ, ಹೆಸ್ಕಾಂ ಅಧಿಕಾರಿ ಎಂ.ಎಸ್.ನಾಗನವರ, ಡಾ.ಮಹೋನ ಕಮತ, ಪಿಎಸ್‌ಐ ಹಾಲಪ್ಪ ಬಾಲದಂಡಿ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಸಿ.ಬಿ.ಪಾಟೀಲ, ಮಹಾಂತೇಶ ಹಿಪ್ಪರಗಿ, ತಾಲೂಕು ಪ್ರದೇಶ ಕುರಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ, ಪುರಸಭೆ ಸದಸ್ಯರಾದ ಸಂತೋಷ ಸೋನವಾಲಕರ, ಹನುಮಂತ ಗುಡ್ಲಮನಿ ಇತರರು ಇದ್ದರು.