ಸಾಮಾಜಿಕ ಸಾಮಾಜಿಕ ಜಾಲತಾಣದ ಸಂದೇಶದ ಬಗ್ಗೆ ಎಚ್ಚರ ವಹಿಸಿ

27 - Copy
Published on

ಆರೋಗ್ಯದ ಬಗ್ಗೆ ಸಾಮಾಜಿಕ ಸಾಮಾಜಿಕ ಜಾಲತಾಣಗಳಲ್ಲಿ ನೀಡುತ್ತಿರುವ ತಪ್ಪು ಸಂದೇಶದ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯಪಟ್ಟರು.

ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ಗಾನಭಾರತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನ ಮತ್ತು ಸಾಧಕ ವೈದ್ಯರಿಗೆ ‘ವೈದ್ಯಶ್ರೀ ಪ್ರಶಸ್ತಿ’ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಜಗತ್ತಿನಲ್ಲಿ ವೈದ್ಯರಲ್ಲೂ ಆರೋಗ್ಯ ಸಮಸ್ಯೆ ಕಂಡುಬರುತ್ತಿದೆ. ವೈದ್ಯರು ಕೂಡ ರೋಗಿಗಳಾಗುತ್ತಿದ್ದಾರೆ. ತಂತ್ರಜ್ಞಾನದಿಂದ ರೋಗಿಗಳು ವೈದ್ಯರಾಗುತ್ತಿದ್ದಾರೆ. ಇಂದು ವಾಟ್ಸಾಪ್, ಯೂಟೂಬ್‌ನ ವೈದ್ಯರು ಹೆಚ್ಚಾಗಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಈ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು. ಆರೋಗ್ಯ ಸಂಬಂಧಿಸಿದ ಯಾವುದೇ ಸಲಹೆಯನ್ನು ತಜ್ಞರಿಂದಲೇ ಪಡೆಯಬೇಕು ಎಂದು ಸಲಹೆ ನೀಡಿದರು.

ಸಾಧಕ ವೈದ್ಯರಾದ ಡಾ.ಎಂ.ಎ.ಶೇಖರ್, ಡಾ.ಕೆ.ಆರ್.ದಾಕ್ಷಾಯಿಣಿ, ಡಾ.ರಾಮಕೃಷ್ಣ, ಡಾ.ಎಂ.ಚಂದ್ರಕಲಾ, ಡಾ.ಲಕ್ಷ್ಮಿನಾರಾಯಣ ಶೆಣೈ, ಡಾ.ಅರ್ಪಿತಾ ಅವರಿಗೆ ವೈದ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಯದೇವ ಹೃದ್ರೋಗ ಸಂಸ್ಥೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಕೆ.ಎಸ್.ಸದಾನಂದ, ವಿಶ್ರಾಂತ ಕುಲಪತಿ ಡಾ.ಹೇಮಂತ್ ಕುಮಾರ್, ಟ್ರಸ್ಟ್ ಅಧ್ಯಕ್ಷ ಡಾ.ಎಂ.ಜಿ.ಆರ್. ಅರಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net