

ಬೇಲೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೆ ದಿನಾಚರಣೆಗೆ ಹಾಗೂ ಜಾಗೃತಿ ಜಾಥಾಕ್ಕೆ ಶಾಸಕ ಎಚ್.ಕೆ.ಸುರೇಶ್ ಶನಿವಾರ ಚಾಲನೆ ನೀಡಿದರು.
ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಪಟ್ಟಣದಲ್ಲಿ ಜಾಥಾ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಡೆಂಘೆ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ರೋಗಲಕ್ಷಣಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವವುದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಬೇಸಿಗೆಯ ಕೊನೆಯ ಹಾಗೂ ಮಳೆಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಡೆಂೆ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಸೋಂಕಿತ ಸೊಳ್ಳೆ ಕಡಿತದಿಂದ ರೋಗ ಹರಡುತ್ತದೆ. ಜತೆಗೆ ಇದು ರಕ್ತನಾಳಗಳಿಗೆ ಹಾನಿಯುಂಟು ಮಾಡುವುದಲ್ಲದೇ, ರಕ್ತ ಕಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿ ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿ ಜೀವಕ್ಕೂ ಸಂಚಕಾರ ತರತ್ತದೆ. ಆದ್ದರಿಂದ ಪ್ರಾರಂಭದ ಹಂತದಲ್ಲೇ ಡೆಂೆ ಜ್ವರದ ಲಕ್ಷಣ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಎಲ್ಲ ಆಸ್ಪತ್ರೆಗಳಲ್ಲೂ ಡೆಂೆಗೆ ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಸಹ ತಮ್ಮ ಮನೆಯ ಒಳಗೆ, ಹೊರಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲ್ಲ ಆಸ್ಪತ್ರೆಗಳಲ್ಲೂ ಡೆಂೆ ರೋಗಕ್ಕೆ ಚಿಕಿತ್ಸೆ ಲಭ್ಯವಿದ್ದು, ಜ್ವರ ತೀವ್ರವಾಗಿದ್ದರೆ ಪ್ಲೇಟ್‌ಲೆಟ್‌ಗಳ ಸಂಖ್ಯೆ ಹೆಚ್ಚಿಸಲು ವೈದ್ಯರು ಕ್ರಮ ಕೈಗೊಳ್ಳಲಿದ್ದು ಯಾರೂ ನಿರ್ಲಕ್ಷ್ಯ ವಹಿಸಬಾರದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಆಡಳಿತ ವೈದ್ಯಾಧಿಕಾರಿ ಡಾ.ಸುಧಾ, ವೈದ್ಯಾಧಿಕಾರಿಗಳಾದ ಡಾ.ಮಹಾಂತೇಶ್, ಆರೋಗ್ಯ ಶಿಕ್ಷಣಾಧಿಕಾರಿ ಉಷಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಯಾನಂದ್, ಆರೋಗ್ಯ ನಿರೀಕ್ಷಣಾಧಿಕಾರಿ ಮೋಹನ್, ಮೇಲ್ವಿಚಾರಕಿ ವಂದನಾ ಸೇರಿದಂತೆ ಆಶಾ ಕಾರ್ಯಕರ್ತೆಯರಿದ್ದರು.