ಶಾಂತವಾಗಿ ವರ್ತಿಸಲಿ

nrp manvi
ಎನ್.ಆರ್.ಪುರ ತಾಲೂಕು ವೈದ್ಯರು ತಹಸೀಲ್ದಾರ್ ತನುಜಾ ಟಿ. ಸವದತ್ತಿಗೆ ಮನವಿ ಸಲ್ಲಿಸಿದರು. ಡಾ. ಕೆ.ಎನ್.ವಿಜಯಕುಮಾರ್, ನರಸಿಂಹಮೂರ್ತಿ, ಶ್ರೀರಂಜಿನಿ, ವಿಜಯಕುಮಾರ್, ವೀರಪ್ರಸಾದ್, ವಿನಯ್ ಇತರರಿದ್ದರು.
Published on

ಎನ್.ಆರ್.ಪುರ: ಜಿಲ್ಲಾ ಆಸ್ಪತ್ರೆಯ ಡಾ. ಬಿ.ಎಸ್.ವೆಂಕಟೇಶ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ತಾಲೂಕು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎನ್.ವಿಜಯಕುಮಾರ್ ಒತ್ತಾಯಿಸಿದರು.

ಬುಧವಾರ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಭಾರತೀಯ ವೈದ್ಯಕೀಯ ಸಂಘ, ಆಯುಷ್ ಫೆಡರೇಷನ್ ಶಾಖೆಯಿಂದ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವೈದ್ಯರು ಕರ್ತವ್ಯ ನಿರ್ವಹಿಸುತ್ತಿರುವಾಗ ತಸ್ಲಿಮ್ ಹಾಗೂ ಅವರ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ ಇಂಥ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳಿಗೆ ಜಾಮೀನು ನೀಡಬಾರದು. ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಡಾ. ಲಿಂಗರಾಜ್ ಮಾತನಾಡಿ, ಪದೇಪದೆ ವೈದ್ಯರ ಮೇಲೆ ಈ ರೀತಿ ಹಲ್ಲೆ ನಡೆಯುತ್ತಿರುವುದು ವಿಷಾದನೀಯ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್, ವೈದ್ಯರ ಮೇಲೆ ಹಲ್ಲೆ ನಡೆಯುತ್ತಿರುವುದು ಕೆಟ್ಟ ಬೆಳವಣಿಗೆ. ರೋಗಿಗಳು ಮತ್ತು ಅವರ ಕುಟುಂಬಸ್ಥರು ಶಾಂತ ರೀತಿಯಿಂದ ವರ್ತಿಸಬೇಕು. ಮನವಿಯನ್ನು ಜಿಲ್ಲಾಧಿಕಾರಿಗೆ ಕಳಿಸಲಾಗುವುದು ಎಂದು ತಿಳಿಸಿದರು.
ವೈದ್ಯರಾದ ನರಸಿಂಹಮೂರ್ತಿ, ಶ್ರೀರಂಜಿನಿ, ವಿಜಯಕುಮಾರ್, ವೀರಪ್ರಸಾದ್, ವಿನಯ್, ಪ್ರಸನ್ನಕುಮಾರ್, ಸುರೇಶ್, ನಿಶಾಲ್, ಬಸವರಾಜ್, ಆಕರ್ಷ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net