ಸ್ವಚ್ಛತೆ ಬಗ್ಗೆಯೂ ಕಾಳಜಿ ಇರಲಿ

27M.D.R.1
ಪರಿಸರ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಮದ್ದೂರು ನಗರದಲ್ಲಿ ನಡೆದ ಪಾರ್ಕ್ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಪರಶುರಾಮ್ ಸತ್ತಿಗೇರಿ, ರಾಮಲಿಂಗಯ್ಯ, ಧನಂಜಯ ಇದ್ದರು.
Published on

ಮದ್ದೂರು: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ನಗರದ ಶ್ರೀ ಮದ್ದೂರಮ್ಮ ಬಡಾವಣೆಯ ಬಳಿಯಿರುವ ಉದ್ಯಾನದಲ್ಲಿ ತಾಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾಪನೆಗೆ 50 ವರ್ಷಗಳು (ಸುವರ್ಣ ಮಹೋತ್ಸವ) ತುಂಬಿದ ಅಂಗವಾಗಿ ಸೋಮವಾರ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಪಾರ್ಕ್ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾಲಿನ್ಯ ಮುಕ್ತ ಮತ್ತು ಹಸಿರು-ಸುಂದರ ಕರ್ನಾಟಕ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ನಮ್ಮ ಸರಳ ಪ್ರಯತ್ನಗಳಿಂದ ದೊಡ್ಡ ಬದಲಾವಣೆ ಸಾಧ್ಯ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಕೈಲಾದ ಮಟ್ಟಿಗೆ ತೊಡಗಿಸಿಕೊಳ್ಳುವುದರ ಜತೆಗೆ ಉತ್ತಮ ಪರಿಸರದ ನಿರ್ಮಾಣಕ್ಕೆ ನಾಂದಿಹಾಡಬೇಕು ಎಂದರು.

ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಬೇಕು, ಪರಿಸರ ಸ್ನೇಹಿ ಬ್ಯಾಗ್‌ಗಳನ್ನು ಪ್ರತಿಯೊಬ್ಬರು ಬಳಸಬೇಕು. ಎಲ್ಲರೂ ತಮ್ಮ ಜನ್ಮದಿನ ಸೇರಿದಂತೆ ಹಲವು ಸಂದರ್ಭಗಳಲ್ಲಿ ಗಿಡಗಳನ್ನು ನೆಟ್ಟು ನೀರೆರೆದು ಪೋಷಿಸುವ ಮನೋಭಾವ ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾ.ಪಂ ಇ.ಓ.ರಾಮಲಿಂಗಯ್ಯ, ಬಿಇಒ ಧನಂಜಯ ಸೇರಿದಂತೆ ಹಲವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net