ಬೆಂಕಿ ಅವಘಡ ಸಂಭವಿಸದಂತೆ ಎಚ್ಚರ ವಹಿಸಿ

ಮಂಗಲ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಪ್ರಾತ್ಯಾಕ್ಷಿಕೆ ಆಯೋಜಿಸಲಾಗಿತ್ತು. ಮಹೇಶ್, ಜಯಪ್ರಕಾಶ್, ಲಿಂಗೇಶ್ ಇತರರು ಇದ್ದರು
ಮಂಗಲ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಪ್ರಾತ್ಯಾಕ್ಷಿಕೆ ಆಯೋಜಿಸಲಾಗಿತ್ತು. ಮಹೇಶ್, ಜಯಪ್ರಕಾಶ್, ಲಿಂಗೇಶ್ ಇತರರು ಇದ್ದರು
Published on

ಹನೂರು: ಮನೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಹಾಗೆಯೇ ಬೆಂಕಿ ನಂದಿಸುವ ವಿಧಾನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಅಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್ ತಿಳಿಸಿದರು.

ತಾಲೂಕಿನ ಮಂಗಲ ಏಕಲವ್ಯ ಮಾದರಿ ವಸತಿ

ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಅಗ್ನಿ ಸುರಕ್ಷತಾ ಕ್ರಮದ ಜಾಗೃತಿ ಹಾಗೂ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನೆ ಹಾಗೂ ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ನಿರ್ಲಕ್ಷ್ಯದ ಕಾರಣದಿಂದ ಅಗ್ನಿ ಅವಘಡ ಸಂಭವಿಸುತ್ತವೆ. ಇದರಿಂದ ವಸ್ತುಗಳ ನಾಶವಾಗುವುದಲ್ಲದೇ ಪ್ರಾಣಾಹಾನಿ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಇತರರಿಗೂ ಹಾನಿಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಬೆಂಕಿ ಅನಾಹುತ ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಗ್ಗೆ ನಿಗಾ ವಹಿಸಬೇಕು. ಒಂದು ವೇಳೆ ಗ್ಯಾಸ್ ಹೊತ್ತಿಕೊಂಡಲ್ಲಿ ಗಾಬರಿಯಾಗುವ ಬದಲು ನಂದಿಸುವ ವಿಧಾನವನ್ನು ತಿಳಿದುಕೊಳ್ಳಬೇಕು. ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಬೇಕು. ಮೊದಲು ಜೀವ ರಕ್ಷಣೆಗೆ ಆದ್ಯತೆ ನೀಡಿ ನಂತರ ವಸ್ತುಗಳ ರಕ್ಷಣೆಗೆ ಮುಂದಾಗಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತಿಯನ್ನು ಹೊಂದಬೇಕು. ಜತೆಗೆ ಕುಟುಂಬಸ್ಥರಲ್ಲೂ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ಜಯಪ್ರಕಾಶ್, ಲಿಂಗೇಶ್, ಹರ್ಷ, ಚಂದ್ರೇಗೌಡ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net