ಜನರಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ

3
Published on


ಮೈಸೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ತಾವೇ ನೇರವಾಗಿ ಸಾರ್ವಜನಿಕರ ಕೆಲಸವನ್ನು ಮಾಡಿಕೊಡಬೇಕು ಎಂದು ಮುಡಾ ಅಧ್ಯಕ್ಷ ಕೆ.ಮರೀಗೌಡ ಸೂಚಿಸಿದರು.

ನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶುಕ್ರವಾರ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಮಾತನಾಡಿ, ಪ್ರಾಧಿಕಾರದಲ್ಲಿ ಮಧ್ಯವರ್ತಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ದಲ್ಲಾಳಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ತಾಕೀತು ಮಾಡಿದರು.

ಸರ್ಕಾರ ಇತ್ತೀಚೆಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುಡಾ ವ್ಯಾಪ್ತಿಯ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಯುಜಿಡಿ ಮತ್ತು ರಸ್ತೆ ಸಮಸ್ಯೆಯನ್ನು ತ್ವರಿತವಾಗಿ ಪರಿಹಾರ ಮಾಡಿ, ಸರಿಯಾದ ಕ್ರಮಗಳಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net