ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಿ

ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದ ಸಹಿಪ್ರಾ ಶಾಲೆಯಲ್ಲಿ ಡಿಎಚ್‌ಒ ರಮೇಶ್ ಬಾಬು ಈಡಿಸ್ ಲಾರ್ವಾ ಸಮೀಕ್ಷೆ ಕಾರ್ಯ ಪರಿಶೀಲಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳಾದ ಅಬ್ದುಲ್, ಮಂಜುನಾಥ್, ಈಶ್ವರ್ ದಾಸಪ್ಪನವರ್, ಪ್ರತಾಪ್ ಇತರರಿದ್ದರು.
ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದ ಸಹಿಪ್ರಾ ಶಾಲೆಯಲ್ಲಿ ಡಿಎಚ್‌ಒ ರಮೇಶ್ ಬಾಬು ಈಡಿಸ್ ಲಾರ್ವಾ ಸಮೀಕ್ಷೆ ಕಾರ್ಯ ಪರಿಶೀಲಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳಾದ ಅಬ್ದುಲ್, ಮಂಜುನಾಥ್, ಈಶ್ವರ್ ದಾಸಪ್ಪನವರ್, ಪ್ರತಾಪ್ ಇತರರಿದ್ದರು.
Published on

ಕುರುಗೋಡು: ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಬೇಕು. ಶಾಲೆ ಪರಿಸರದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಡಿಎಚ್‌ಒ ರಮೇಶ್ ಬಾಬು ಹೇಳಿದರು.

ತಾಲೂಕಿನ ಕಲ್ಲುಕಂಬ ಗ್ರಾಮದ ಸಹಿಪ್ರಾ ಶಾಲೆಗೆ ಸೋಮವಾರ ಭೇಟಿ ನೀಡಿ ಡೆಂೆ ನಿಯಂತ್ರಣಕ್ಕಾಗಿ ಈಡಿಸ್ ಲಾರ್ವಾ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಮಳೆಗಾಲ ಆರಂಭವಾಗಿದ್ದು, ಸಾಂಕ್ರಾಮಿಕ ರೋಗ ತಡೆಗಟ್ಟುವುದಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಡೆಂೆ ಈಡಿಸ್ ಎಂಬ ಸೊಳ್ಳೆಗಳಿಂದ ಹರಡುತ್ತದೆ. ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಹಳೇ ಟೈರ್, ಎಣ್ಣೆಯ ಡ್ರಮ್, ನೀರು ಸಂಗ್ರಹಕಗಳನ್ನು ಸ್ವಚ್ಛವಾಗಿಡುವುದರಿಂದ ಸೊಳ್ಳೆ ನಿಯಂತ್ರಣ ಮಾಡಬಹುದು. ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಮನೆಯ ಸುತ್ತಲು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net