ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ

15-11-Shiva-5
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಬುಧವಾರ ಬರ ಪರಿಸ್ಥಿತಿ ಕುರಿತು ಅಕಾರಿಗಳ ಸಭೆ ಜರುಗಿತು. ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಬಸನಗೌಡ ದದ್ದಲ್, ಕರೆಮ್ಮ ನಾಯಕಿ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಮಸ್ಯೆಯಾಗದಂತೆ ಹೆಚ್ಚಿನ ಒತ್ತು ನೀಡಿ ಸಂಬಂಸಿದ ಅಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಬುಧವಾರ ಹಮ್ಮಿಕೊಂಡಿದ್ದ ಬರ ಪರಿಸ್ಥಿತಿ ಕುರಿತು ಅಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಮಳೆ ಕೊರತೆಯಿಮದ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮಳೆ ಕೊರತೆಯಿಂದ ಕೆರೆಗಳು ಖಾಲಿಯಾಗಿದ್ದು, ಕುಡಿಯುವ ನೀರಿನ ಕೊರತೆ ಎದುರಾಗದಂತೆ ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಮೇವಿನ ದಾಸ್ತಾನು ಮಾಡಬೇಕು. ಹಿಂಗಾರು ಹಂಗಾಮಿನಲ್ಲಿ ಬೆಳೆದ ಬೆಳಗಳು ಹಾನಿಗೊಳಗಾಗಿದ್ದು, ಈ ಬಗ್ಗೆ ಸರ್ವೇ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಬೇಕು. ಕುಡಿಯುವ ನೀರಿನ ಕೆರೆ ತುಂಬಿಸಲು ಆಯಾ ತಾಲೂಕು ತಹಸೀಲ್ದಾರರು ಕ್ರಮಕೈಗೊಳ್ಳಬೇಕು.
ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜನೆ ಮಾಡಬೇಕು. ಯಂತ್ರಗಳನ್ನು ಉಪಯೋಗ ಮಾಡದೇ ಕೂಲಿಕಾರ್ಮಿಕರಿಗೆ ಕೆಲಸ ಕೊಡಬೇಕು. ಯಂತ್ರಗಳ ಬಳಕೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಡಾ.ಶರಣಪ್ರಕಾಶ ಪಾಟೀಲ್ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಬಸನಗೌಡ ದದ್ದಲ್, ಕರೆಮ್ಮ ನಾಯಕಿ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಹಾಯಕ ಆಯುಕ್ತೆ ಮಹೆಬೂಬಿ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net