ಪಾತಪಾಳ್ಯ: ಡೆಂ ಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಮನೆ ಸುತ್ತಮುತ್ತ ಒಳಾಂಗಣ ಹಾಗೂ ಹೊರಾಂಗಣದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಿ.ಫಕೃದ್ಧೀನ್ ತಿಳಿಸಿದರು. ಪಾತಪಾಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಶುಕ್ರವಾರ ಏರ್ಪಡಿಸಿದ್ದ ಡೆಂ ಜ್ವರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಡೆಂ ತಡೆಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಧರಿಸಬೇಕು. ಸೊಳ್ಳೆಗಳು ಕಚ್ಚದಂತೆ ಮೈತುಂಬಾ ಬಟ್ಟೆ ಧರಿಸಬೇಕು. ಸೊಳ್ಳೆ ಬತ್ತಿ ಮತ್ತು ಮುಲಾಮು ದ್ರಾವಣ ಉಪಯೋಗಿಸಬೇಕು. ಮಳೆಗಾಲದಲ್ಲಿ ಸಾಮಾನ್ಯವಾಗಿ ನೀರು ಶೇಖರಣೆಯಾಗುತ್ತದೆ. ಹೀಗಾಗಿ ವೈರಾಣು ಜ್ವರ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ವಹಿಸಬೇಕು ಎಂದರು. ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಪಿ.ಎ.ಶಶಿಕಲಾ ಮಾತನಾಡಿ, ನೀರಿನ ಡ್ರಮ್ಗಳಿಗೆ ಮುಚ್ಚಳ ಮುಚ್ಚಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಬಾಟಲಿ, ಪ್ಲಾಸ್ಟಿಕ್ ಲೋಟಗಳು, ಒರಳು ಕಲ್ಲು, ಚಿಪ್ಪಿನಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಡೆಂ ಸಂಶಯಾಸ್ಪದ ಪ್ರಕರಣಗಳ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಕ್ಷೇತ್ರ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಈಡಿಸ್ ಲಾರ್ವ ಸರ್ವೆ ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.