

ಬೇಲೂರು: ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕರಪತ್ರ ಹಾಗೂ ಧ್ವನಿವರ್ಧಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಹೇಳಿದರು.
ಡೆಂೆ ಮಾಸಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆ ನೀರು ಗುಂಡಿಗಳಲ್ಲಿ ನಿಲ್ಲುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಬಾರಿ 3 ಡೆಂೆ ಪ್ರಕರಣ ಮಾತ್ರ ಕಂಡು ಬಂದಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು. ತಹಸೀಲ್ದಾರ್ ನಟೇಶ್ ಮಾತನಾಡಿ, ಸಾಂಕ್ರಾಮಿಕ ರೋಗ ತಡೆಗಟ್ಟಲು ಇಲಾಖೆ ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿದ್ದು, ಸಾರ್ವಜನಿಕರು ಅವರಿಗೆ ಸಹಕರಿಸಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿದರು. ತಾಪಂ ಇಒ ರವಿಕುಮಾರ್, ಆಯುಷ್ ವೈದ್ಯಾಧಿಕಾರಿ ಹಬೀಬುಲ್ಲ, ಡಾ.ಗೀತಾ, ಹಿರಿಯ ಆರೋಗ್ಯ ಸಹಾಯಕರಾದ ಕೃಷ್ಣಪ್ಪ, ಚಂದ್ರಮ್ಮ, ಭಾರತಿ ಇತರರಿದ್ದರು.