ಅಗತ್ಯ ವಸ್ತು ಖರೀದಿಸುವಾಗ ಇರಲಿ ಎಚ್ಚರ

grahaka day
ಉಡುಪಿಯಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆಯನ್ನು ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಉಡುಪಿ

ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರೇ ಆಗಿರುತ್ತಾರೆ. ಹೀಗಾಗಿ ದೈನಂದಿನ ವಸ್ತು ಸೇರಿದಂತೆ ಇನ್ನಿತರ ಅಗತ್ಯತೆ ಖರೀದಿಸುವಾಗ ಗುಣಮಟ್ಟ ಪರೀಕ್ಷಿಸಿ, ಎಚ್ಚರಿಕೆಯಿಂದ ಖರೀದಿಸಬೇಕು. ಇಲ್ಲದಿದ್ದಲ್ಲಿ ಮೋಸಕ್ಕೊಳಗಾಗುವ ಸಾಧ್ಯತೆ ಇರುತ್ತದೆ. ಮೋಸವಾದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುವಾರಿ ತಿಳಿಸಿದರು.

ಉಡುಪಿಯ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ವಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ಹಾಗೂ ವಿವಿಧ ಇಲಾಖೆ ಆಶ್ರಯದಲ್ಲಿ ಶನಿವಾರ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ವಾತನಾಡಿದರು.

ಜಿಲ್ಲಾ ಗ್ರಾಹಕ ವಾಹಿತಿ ಕೇಂದ್ರ ಬಳಕೆದಾರರ ವೇದಿಕೆ ಸಂಚಾಲಕ ಯು.ಜಿ. ಕಾಮತ್ ಪ್ರಾಸ್ತಾವಿಕವಾಗಿ ವಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್. ವಾತನಾಡಿದರು. ಪ್ರಾಂಶುಪಾಲೆ ಆಶಾಕುವಾರಿ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯೆ ಗೀತಾ ಶೇಟ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರವೀಂದ್ರ, ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸುಜಾತಾ ಕೋರಳ್ಳಿ ಉಪಸ್ಥಿತರಿದ್ದರು. ಬಳಕೆದಾರರ ವೇದಿಕೆ ವಿಶ್ವಸ್ಥ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿದರು. ಎನ್.ರಾಮ ಭಟ್ ವಂದಿಸಿದರು.

ವಸ್ತು ಹಾಗೂ ಸೇವೆ ಪಡೆದ ಅಂತಿಮ ಬಳಕೆದಾರನೇ ಗ್ರಾಹಕನಾಗುತ್ತಾನೆ. ಯಾವುದೇ ವಸ್ತು ಖರೀದಿಸಿದಾಗ ಅದರ ಬಿಲ್ ಅಥವಾ ರಶೀದಿಯನ್ನು ಕನಿಷ್ಠ ಅವಧಿಯವರೆಗೆ ಕಾಯ್ದುಕೊಳ್ಳಬೇಕು. ಒಂದು ವೇಳೆ ಖರೀದಿಸಿದ ವಸ್ತುಗಳಲ್ಲಿ ದೋಷ ಇದ್ದರೆ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ವ್ಯಾಜ್ಯ ಹೂಡಿ ಪರಿಹಾರ ಪಡೆಯಬಹುದು. ಸುನೀಲ್ ವಾಸರೆಡ್ಡಿ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಜಿಲ್ಲಾಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net