ನಕಲಿ ಚಾಲಕರಿದ್ದಾರೆ: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ವೇಳೆ ಆಟೋ ಹತ್ತುವ ಮುನ್ನ ಎಚ್ಚರ!

AutoRikshaw
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಆಟೋ ಡ್ರೈವರ್​​ಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಆಟೋ ಹತ್ತುವ ಮುನ್ನ ಎಚ್ಚರ ವಹಿಸಬೇಕೆಂದು ಪೊಲೀಸರು ಸೂಚಿಸಿದ್ದಾರೆ.

ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಿರುವ ಕಳ್ಳರು, ಹೊಂಚು ಹಾಕಿ ಕಾದು ಕುಳಿತಿರುತ್ತಾರೆ. ಒಂಟಿ ಮಹಿಳೆಯರನ್ನು ಆಟೋ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿನ್ನಾಭರಣ ಕಸಿದು ಸುಲಿಗೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಯಶವಂತಪುರ ರೈಲ್ವೇ ನಿಲ್ದಾಣದ ಬಳಿ ಒಂಟಿ ಮಹಿಳೆಯನ್ನು ಆಟೋ ಹತ್ತಿಸಿಕೊಂಡ ಖದೀಮ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತಲ್ಲಿ ಇದ್ದ ಚಿನ್ನವನ್ನು ಸುಲಿಗೆ ಮಾಡಿ ಎಸ್ಕೇಪ್ ಆಗುತ್ತಿದ್ದವನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಇಮ್ರಾನ್ ನಿಂದ 150 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net