ಜನಸಾಮಾನ್ಯರಿಗೆ ಸಾಧನೆಗಳ ಮನವರಿಕೆ ಮಾಡಿ

6mahesh2
Published on

ಚಾಮರಾಜನಗರ: ಜನಸಾಮಾನ್ಯರಿಗೆ ಕಾಂಗ್ರೆಸ್‌ನ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಎಐಸಿಸಿ ವಕ್ತಾರೆ ಮತ್ತು ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಐಶ್ವರ್ಯಾ ಮಹದೇವ್ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಗ್ರಾಪಂ ಮಟ್ಟದ ಉಸ್ತುವಾರಿಗಳಿಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಡಿಜಿಟಲ್ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮೋದಿ ಹಾಗೂ ಬಿಎಸ್‌ವೈ ನೇತೃತ್ವದ ಸರ್ಕಾರ ಘೋಷಿಸಿರುವ ಯೋಜನೆಗಳು ಗ್ರಾಪಂ ಮಟ್ಟಕ್ಕೆ ತಲುಪಿದೆಯೇ ಎಂಬುದರ ಬಗ್ಗೆ ಸ್ಥಳೀಯವಾಗಿ ಸವೇ ರ್ ಮಾಡಬೇಕು. ಜತೆಗೆ ಲಾನುಭವಿಗಳನ್ನು ನೇರವಾಗಿ ಮಾತನಾಡಿಸಿ ಅವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಸ್ಥಳೀಯ ಮಟ್ಟದಲ್ಲಿ ಇದರ ವಿರುದ್ಧ ಜಾಗೃತಿ ಮೂಡಿಸಿ ಕಾಂಗ್ರೆಸ್ ಸಾಧನೆಯನ್ನು ತಿಳಿಸಬೇಕು ಎಂದರು.

ಪ್ರಬಲವಾಗಿ ಸಾಮಾಜಿಕ ಜಾಲತಾಣವನ್ನು ಸಂಘಟಿಸುವ ಮೂಲಕ ಯುವ ಜನಾಂಗ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮಾಡಬೇಕು ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಹೆಚ್ಚಿನ ರೀತಿಯಲ್ಲಿ ಸಂಘಟನೆಗೊಳ್ಳಲಿದೆ. ತಾವೆಲ್ಲರೂ ಸಕ್ರಿಯವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಮಾಜಿ ಸಂಸದ ಆರ್.ಧ್ರುವನಾರಾಯಣ್, ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ವೀಕ್ಷಕರಾದ ಅಕ್ಬರ್ ಅಲೀ, ಪಲ್ಲವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net