ಮಹಿಳೆಯರೊಂದಿಗೆ ಸೌಜನ್ಯದಿಂದ ವರ್ತಿಸಲಿ

28 Jaggu 9
Published on

ಧಾರವಾಡ: ಬಸ್ ಚಾಲಕರು ಹಾಗೂ ನಿರ್ವಾಹಕರು, ಬಸ್ ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಅವರ ಕೋರಿಕೆಯಂತೆ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸಬೇಕು. ನಿರ್ವಾಹಕರ ವಿರುದ್ಧ ದೂರುಗಳು ಬಂದಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಹೇಳಿದರು.

ತಾಲೂಕು ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಕ್ತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಪ್ರಗತಿ ಪರಿಶೀಲಿಸಿದರು.

ಸಮಿತಿ ಸದಸ್ಯ ಕಾರ್ಯದರ್ಶಿ ಗಂಗಾಧರ ಕಂದಕೂರ, ತಾಪಂ ಇಒ ಚಂದ್ರಶೇಖರ ಕದಂ, ಪರಮೇಶ್ವರ ಕರೀಕಟ್ಟಿ, ಮೈಲಾರಗೌಡ ಪಾಟೀಲ, ಕಲಾವತಿ ಭೀಮಕ್ಕನವರ, ಮಂಜು ಉಡಕೇರಿ, ಜಾರ್ ಕಳ್ಳಿಮನಿ, ಕಾರ್ತಿಕ ಗೋಕಾಕ, ಸಿದ್ಧಪ್ಪ ಅಗಸಿಮನಿ ಹಾಗೂ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net