

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗಿ ಪ್ರವಾಹ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ. ಇದರಿಂದ ವಿವಿಧ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕೈಗೊಳ್ಳಬೇಕು. ರ್ನಿಲಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಟ್ಟ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿನ ಬಹುತೇಕ ಅಣೆಕಟ್ಟೆಗಳು ಭರ್ತಿಯಾಗುತ್ತಿವೆ. ಜಲಾಶಯಗಳ ನೀರಿನಮಟ್ಟ ಕುರಿತು ಅಲ್ಲಿನ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಸಾಧಿಸಿ ವರದಿ ಪಡೆದು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಲ್ಲಿನ ಜನ&ಜಾನುವಾರುಗಳನ್ನು ಸುರತ ಸ್ಥಳಗಳಿಗೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಮೂಲ ಸೌಕರ್ಯ ಕಲ್ಪಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.
ಅಪಾಯಮಟ್ಟ ಮೀರಿ ಹರಿಯುವ ನದಿ, ಹಳ್ಳ&ಕೊಳ್ಳಗಳ ಪಾತ್ರದ ಹತ್ತಿರ ಜನ&ಜಾನುವಾರುಗಳ ಸಂಚಾರ ನಿಷೇಧಿಸಬೇಕು. ಸೇತುವೆಗಳ ಮೇಲೆ ಜನ, ವಾಹನ ಸಂಚಾರ ಮಾಡದಂತೆ ಅಪಾಯದ ಕುರಿತು ಸೂಚನಾ ಫಲಕ ಅಳವಡಿಕೆ ಹಾಗೂ ಅಗತ್ಯವಿದ್ದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಸೂಚಿಸಿದರು.
ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳನ್ನು ಸುರತವಾಗಿ ಮನೆಗೆ ಸೇರಿಸುವ ಕುರಿತು ಶಾಲಾ ಮುಖ್ಯಸ್ಥರು, ಸ್ಥಳಿಯ ಆಡಳಿತ ನಿಗಾವಹಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳಲ್ಲಿ ತರಗತಿ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತ ಶುಭ ಬಿ., ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಶಿಣ ಇಲಾಖೆ ಉಪನಿರ್ದೇಶಕಿ ಲೀಲಾವತಿ ಹಿರೇಮಠ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಬಸವರಾಜ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ಮಹಾಂತೇಶ ಮುರಗೋಡ, ಡಿಸಿಪಿ ರೋಹನ ಜಗದೀಶ ಇತರರಿದ್ದರು.