

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುವ ಮುನ್ಸೂಚನೆ ಇದ್ದು, ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಬರ ಪರಿಸ್ಥಿತಿ ಹಾಗೂ ಮುಂಗಾರು ಮಳೆ ಪ್ರವಾಹ ಪೂರ್ವ ಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆ ಆಗುವ ಸಂಭವ ಇದೆ. ಈ ಸಮಯದಲ್ಲಿ ಯಾವುದೇ ಜೀವ ಹಾನಿ ಆಗದಂತೆ ತಡೆಯಲು ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ತಿಳಿಸಬೇಕು. ಗುಡುಗು, ಮಿಂಚು ಹಾಗೂ ಮಳೆ ಬಂದಾಗ ರೈತರು ಹೊಲಗಳಲ್ಲಿ ಸುರತವಾಗಿ ಇರುವ ಕುರಿತು ಎಲ್ಲ ತಹಸೀಲ್ದಾರರು, ತಾಪಂ ಇಒ, ನಗರ, ಸ್ಥಳಿಯ ಸಂಸ್ಥೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದರು.
ಗ್ರಾಮಗಳಲ್ಲಿ ಕೆರೆಗಳು ಭತಿರ್ಯಾಗುವ ಹಾಗೂ ರ್ದುಬಲ ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ತಿ ಕಾರ್ಯ ನಡೆಸಬೇಕು. 2019 ಹಾಗೂ 2021ರಲ್ಲಿ ಜಿಲ್ಲೆಯ 78 ಗ್ರಾಮಗಳನ್ನು ಪ್ರವಾಹ ಪೀಡಿತ ಎಂದು ಗುರುತಿಸಲಾಗಿದ್ದು, ತಹಸೀಲ್ದಾರರು ಹಾಗೂ ತಾಪಂ ಇಓಗಳು ತಮ್ಮ ವ್ಯಾಪ್ತಿಯ ಪ್ರವಾಹ ಸಂಭವನೀಯ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕು. ಮುನ್ನೆಚ್ಚರಿಕೆ ಹಾಗೂ ಪರ್ಯಾಯ ವ್ಯವಸ್ಥೆಗಳ ಬಗ್ಗೆ ವರದಿ ಸಿದ್ಧಪಡಿಸಬೇಕು ಎಂದು ಸೂಚಿಸಿದರು.
ಹು&ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರಾಜ ಕಾಲುವೆ ಹಾಗೂ ಚರಂಡಿಗಳನ್ನು ತಣ ಸ್ವಚ್ಛಗೊಳಿಸಬೇಕು. ರಸ್ತೆ ಬದಿಯಲ್ಲಿ ಅಪಾಯಕಾರಿ ಗಿಡ ಮರಗಳನ್ನು ಹಾಗೂ ಟೊಂಗೆಗಳನ್ನು ಈಗಲೇ ತೆರವುಗೊಳಿಸಬೇಕಲ್ಲದೆ, ಮ್ಯಾನಹೋಲ್ಗಳನ್ನು ತಣ ಮುಚ್ಚಿಸುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಕಾರಿ ಶಾಲಂ ಹುಸೇನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ ಎಂ., ಜಿಪಂ ಉಪ ಕಾರ್ಯದಶಿರ್ ವಿಜಯ ಅಜೂರ, ಇತರರು ಇದ್ದರು.