ಸಮಯಪ್ರಜ್ಞೆ ರೂಢಿಸಿಕೊಳ್ಳಿ

Be punctual
ವಿಜಯಪುರದ ಆದರ್ಶನಗರದ ಎಕ್ಸಲಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆಯಲ್ಲಿ ವಿದ್ಯಾರ್ಥಿನಿ ಭುವನೇಶ್ವರಿ ಕೋರಿ ಮಾತನಾಡಿದರು.
Published on

ವಿಜಯಪುರ: ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸಾಮರ್ಥ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ರಾಜಶೇಖರ ಕೌಲಗಿ ಹೇಳಿದರು.

ಇಲ್ಲಿನ ಆದರ್ಶ ನಗರದ ಎಕ್ಸಲಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನೆಹರು ಅವರ ಜನ್ಮದಿನದ ಹಿನ್ನೆಲೆ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿ ಕ್ಷಣವು ಅತೀ ಅಮೂಲ್ಯ ಸಮಯದ ಸರಿಯಾದ ಪ್ರಯೋಜನ ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿ ಶಾಲೆಯ ಹಿಂದಿನ ವಿದ್ಯಾರ್ಥಿನಿ ಭುವನೇಶ್ವರಿ ಕೋರಿ ಮಾತನಾಡಿ, ಮಕ್ಕಳು ಬಾಲ್ಯದಲ್ಲಿ ಉತ್ತಮ ಸಂಸ್ಕಾರಗಳನ್ನು ರೂಢಿಸಿಕೊಳ್ಳುವ ಅಗತ್ಯವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಸವರಾಜ ಮದಭಾವಿ, ಯೋಗಿನಿ ದೇಶಪಾಂಡೆ ಮಾತನಾಡಿದರು. ಮುಖ್ಯ ಗುರು ಎಂ.ಐ. ಬಿರಾದಾರ, ಪ್ರಿಯದರ್ಶಿನಿ ಮಠ ಸ್ವಾಗತಿಸಿ ಪರಿಚಯಿಸಿದರು, ಪಿ.ಬಿ. ಖೇಡಗಿ ನಿರೂಪಿಸಿದರು. ಎಸ್.ಎಂ. ಸೂರ್ಯವಂಶಿ ವಂದಿಸಿದರು.

ಮಕ್ಕಳ ದಿನಾಚರಣೆ ಹಿನ್ನೆಲೆ ನಡೆದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net