ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಮುಂದಾಗಿ

10-01-Shiva-3
ರಾಯಚೂರಿನ ತಹಸೀಲ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯಲ್ಲಿ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅೀಕ್ಷಕ ಎಂ.ಎನ್.ಶಶಿಧರ ಮಾತನಾಡಿದರು. ಉಪ ಅೀಕ್ಷಕ ಸಿದ್ಧೇಶ್ವರ, ತಹಸೀಲ್ದಾರ್ ಸುರೇಶ ವರ್ಮಾ ಮಾತನಾಡಿದರು.
Published on

ರಾಯಚೂರು: ಸರ್ಕಾರಿ ನೌಕರರು ಸಾರ್ವಜನಿಕರ ಸೇವಕರಿದ್ದಂತೆ, ನೌಕರರು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸಲು ನಿಯಮಾನುಸಾರ ಕರ್ತವ್ಯ ನಿರ್ವಹಿಸಿದಲ್ಲಿ ಸೇವೆಯಲ್ಲಿ ಪಾರದರ್ಶಕತೆ ಕಾಣಬಹುದಾಗಿದೆ ಎಂದು ಲೋಕಾಯುಕ್ತ ಜಿಲ್ಲಾ ಪೊಲೀಸ್ ಅೀಕ್ಷಕ ಎಂ.ಎನ್.ಶಶಿಧರ ಹೇಳಿದರು.
ಸ್ಥಳೀಯ ತಹಸೀಲ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿ, ಇಲಾಖೆಯಿಂದ ಪ್ರತಿಯೊಂದು ತಾಲೂಕುಗಳಲ್ಲಿ ತಿಂಗಳಿಗೊಮ್ಮೆ ಅಹವಾಲು ಸ್ವೀಕಾರ ಸಭೆ ನಡೆಸಲಾಗುತ್ತಿದ್ದು, ಜನರು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಸಮಸ್ಯೆ ಬಗ್ಗೆ ಪೂರ್ಣ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲಾಗುವುದು. ಪರಿಹಾರವಾಗದ ಸಮಸ್ಯೆಗಳನ್ನು ನಿಗದಿತ ಕಾಲಮಿತಿಯೊಳಗೆ ಪರಿಹಾರ ನೀಡಲಾಗುವುದು. ರಾಯಚೂರು ತಾಲೂಕಿನಲ್ಲಿ ಇದುವರೆಗೂ 24 ದೂರುಗಳು ದಾಖಲಾಗಿದೆ.
26 ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಕೆಲಸ ಕಾರ್ಯಗಳನ್ನು ಪರಿಶೀಲನೆ ಮಾಡುವ ನಿಟ್ಟಿನಲ್ಲಿ ಹಾಗೂ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಂ.ಎನ್.ಶಶಿಧರ ತಿಳಿಸಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಜಿಲ್ಲಾ ಉಪ ಅೀಕ್ಷಕ ಸಿದ್ಧೇಶ್ವರ, ತಹಸೀಲ್ದಾರ್ ಸುರೇಶ ವರ್ಮಾ, ತಾ.ಪಂ. ಇಒ ಚಂದ್ರಶೇಖರ ಪವಾರ, ಪ್ರಾದೇಶಿಕ ಸಾರಿಗೆ ಅಕಾರಿ ಕೆ.ವಿನಯಾ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net