ವೈಜ್ಞಾನಿಕ ಮನೋಭಾವ ಹೊಂದಲಿ

2ckd1
Published on

ಚಿಕ್ಕೋಡಿ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಿಎಲ್‌ಇ ನರ್ಸಿಂಗ್ ಕಾಲೇಜು ಪ್ರಾಚಾರ್ಯ ಸಿ.ಎಸ್.ಮಠಮತಿ ಹೇಳಿದರು.

ಪಟ್ಟಣದ ಸಿಎಲ್‌ಇ ಸಂಸ್ಥೆಯ ಕೆಕೆಸಿಬಿಎಸ್‌ಇ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಕ್ಷೇತ್ರ ಅಭಿವೃದ್ಧಿಯಾದಂತೆ ದೇಶ ಅಭಿವೃದ್ಧಿ ಹೊಂದಲಿದೆ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನದ ಕುರಿತು ಹೆಚ್ಚು ಆಸಕ್ತಿ ವಹಿಸಿ ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು.

ಪ್ರಾಚಾರ್ಯೆ ಸ್ಮೀತಾ ಶಿಂಧೆ ಮಾತನಾಡಿ, ವಿದ್ಯಾರ್ಥಿಗಳು ಹೊಸ ಸಂಶೋಧನೆಯಲ್ಲಿ ತೊಡಗಿಸಿಕೊಂಡು ದೇಶಕ್ಕೆ ಕೊಡುಗೆ ನೀಡಬೇಕೆಂದರು. ಐಟಿಐ ಕಾಲೇಜು ಪ್ರಾಚಾರ್ಯ ಪ್ರಕಾಶ ಚನ್ನವರ, ಎಂಕೆಕೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಿ.ಡಿ.ರೋಕಡೆ, ಎಂಕೆಕೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಡಿ.ಎಸ್.ಕೋಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net