ಏಕಚಿತ್ತದಿಂದ ಭಾಗಿಯಾಗಿ ಯಶಸ್ಸುಗಳಿಸಿ

6 hrp 02
ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರ್ರೌಢಶಾಲಾ ಕ್ರೀಡಾ ಕೂಟದಲ್ಲಿ ತಾಲೂಕಿನ ಚಿಗಟೇರಿ ಗ್ರಾಮದ ನಾರದ ಮುನಿ ಶಾಲೆಯ 12 ಜನ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದವರಿಗೆ ಪ್ರಶಸ್ತಿ ನೀಡಲಾಯಿತು.
Published on

ಹರಪನಹಳ್ಳಿ: ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಬಿಇಒ ಎಚ್ ಲೇಪಾಕ್ಷಪ್ಪ ಹೇಳಿದರು.

ತಾಲೂಕಿನ ಚಿಗಟೇರಿ ಗ್ರಾಮದ ನಾರದ ಮುನಿ ಶಾಲೆಯ 12 ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು.

ತಾಲೂಕಿನಿಂದ ವಿವಿಧ ಸರ್ಕಾರಿ ಶಾಲೆಯ ಮಕ್ಕಳು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿತ್ತಿರುವುದು ಹೆಮ್ಮೆಯ ಸಂಗತಿ. ಗ್ರಾಮೀಣ ಭಾಗದ ಮಕ್ಕಳು ಯಾವುದೇ ದುಶ್ಚಟಗಳ ಕಡೆಗೆ ಗಮನ ವಹಿಸದೆ ಏಕಚಿತ್ತದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಇದೇ ರೀತಿ ತಮ್ಮ ಪ್ರತಿಭೆಯನ್ನು ರಾಷ್ಟ್ರ ಮಟ್ಟ ಕ್ರೀಡಾಕೂಟದಲ್ಲಿ ತೋರಿಸಬೇಕು ಎಂದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜನಾರ್ದನ ರೆಡ್ಡಿ ಮಾತನಾಡಿ, ಗುಂಪು ಆಟಗಳಲ್ಲಿಯೂ ವಿಭಾಗೀಯ ಮಟ್ಟದವರೆಗೆ ನಮ್ಮ ಶಾಲೆಯ ಮಕ್ಕಳು ಅತ್ಯಂತ ಶ್ರದ್ಧೆಯ ಆಟವನ್ನು ಪ್ರದರ್ಶಿಸಿ ಸಮಗ್ರ ಪ್ರಶಸ್ತಿಗೆ ಭಾಜನಾರಾಗಿದ್ದರು. ಗ್ರಾಮೀಣ ಪ್ರದೇಶದ ಮಕ್ಕಳು ಇನ್ನು ಹೆಚ್ಚಿನ ಕ್ರೀಡಾ ಕೌಶಲ ಮೈಗೂಡಿಸಿಕೊಂಡರೆ ರಾಷ್ಟ್ರ ಮಟ್ಟಕ್ಕೆ ಸುಲಭವಾಗಿ ಆಯ್ಕೆಯಾಗಬಹುದು. ಯಾವುದೇ ಕ್ಷೇತ್ರದಲ್ಲಿ ಯಶಸ್ಸುಗಳಿಸಲು ಸಮಚಿತ್ತದಿಂದ ಆಡಬೇಕಾಗುತ್ತದೆ ಎಂದರು. ನಾರದ ಮುನಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವನಗೌಡ, ಕಾರ್ಯದರ್ಶಿ ನಿತ್ಯಾನಂದ ಎಂ, ಗ್ರಾಪಂ ಅಧ್ಯಕ್ಷ ನಾಗರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net