ನಾಳೆ ಬೆಳಗ್ಗೆವರೆಗೆ ಬೀಚ್ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Kodi beach
Published on

ಉಡುಪಿ: ಹೊಸ ವರ್ಷ ಆಚರಣೆ ಸಂಬಂಧಿಸಿ ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಕಡಲತೀರಗಳಲ್ಲಿ ಜನದಟ್ಟಣೆ ತಡೆಯುವ ಉದ್ದೇಶದಿಂದ ಬುಧವಾರ ಸಾಯಂಕಾಲ 6 ರಿಂದ ಗುರುವಾರ ಬೆಳಗ್ಗೆ 6 ಗಂಟೆವರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷದ ಆಚರಣೆ ಅಂಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದು ಕೋವಿಡ್ ಸಾಂಕ್ರಮಿಕ ರೋಗ ತಡೆಗಟ್ಟಲು ಅಸಾಧ್ಯವಾಗುವುದರಿಂದ ಮತ್ತು ಮದ್ಯಪಾನ ಮಾಡಿ ಬೀಚ್‌ಗೆ ಆಟವಾಡುವುದು, ನೀರಿನಲ್ಲಿ ಮುಳುಗಿ ಅಪಾಯ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೀಚ್‌ಗಳ ಪ್ರವೇಶ ನಿರ್ಬಂಧಿಸುವಂತೆ ಪೊಲೀಸ್ ಅಧೀಕ್ಷಕರ ಮನವಿ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಹೊಸ ವರ್ಷವನ್ನು ಸರಳವಾಗಿ ಆಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net