

ಮುಂಡಗೋಡ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ರಾಮಕೃಷ್ಣ ದುರ್ಗಪ್ಪ ಲಕ್ಮಾಪುರ (45) ಗಾಯಗೊಂಡ ರೈತ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಿಂದಿನಿಂದ ಬಂದ ಕರಡಿ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ರೈತ ಚೀರಾಡಿದಾಗ ಕರಡಿ ಅಲ್ಲಿಂದ ಓಡಿ ಹೋಗಿದೆ. ಗಾಯಾಳುವನ್ನು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.