ನರಸೀಪುರದಲ್ಲಿ ಕರಡಿ ಉಪಟಳ

Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ನರಸೀಪುರದ ಗ್ರಾಮದ ಕೆಂಚರಾಯಸ್ವಾಮಿ ದೇವಸ್ಥಾನದ ಬಳಿ ಆಗಾಗ್ಗೆ ಕರಡಿಗಳು ಆಹಾರ ಹುಡುಕಿಕೊಂಡು ಗ್ರಾಮಕ್ಕೆ ಬರುತ್ತಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಈ ಭಾಗದಲ್ಲಿ ಆಗಾಗ್ಗೆ ಕಾಡು ಪ್ರಾಣಿಗಳು ಮನುಷ್ಯನ ಮೇಲೆ ದಾಳಿ ಮಾಡಿ ಎಷ್ಟೋ ಬಾರಿ ಗಾಯಗೊಳಿಸಿವೆ. ಅಲ್ಲದೆ ಮೃತಪಟ್ಟಿರುವ ನಿದರ್ಶನಗಳೂ ಇವೆ. ಕಾಡು ಪ್ರಾಣಿಗಳಿಂದ ಮನುಷ್ಯನ ಮೇಲೆ ಆಗುತ್ತಿರುವ ಅನಾಹುತ ತಪ್ಪಿಸಲು ಅನಾಹುತ ತಪ್ಪಿಸಲು ತಾಲೂಕು ಆಡಳಿತ ಮತ್ತು ಅರಣ್ಯ ಇಲಾಖೆಯವರು ಎಚ್ಚರ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net