ಅಂದದ ಕಟ್ಟಡ ನಿರ್ಮಾಣ ನಿರ್ಮಿತಿ ಕೇಂದ್ರದ ವೈಶಿಷ್ಟ್ಯ

31Anand5
Published on

ಬೆಳಗಾವಿ: ನಿರ್ಮಿತಿ ಕೇಂದ್ರವು ನಿರ್ಮಾಣ ಹಾಗೂ ತಾಂತ್ರಿಕತೆಯಲ್ಲಿ ತನ್ನದೇ ಆದ ಕೊಡುಗೆ ನೀಡುತ್ತ ಬಂದಿದೆ. ನೂತನ ತಂತ್ರಜ್ಞಾನ ಆಧಾರಿತ ಕಟ್ಟಡ ನಿರ್ಮಾಣ ವಸ್ತುಗಳ ಆವಿಷ್ಕಾರ & ತಯಾರಿಕೆ & ಬಳಕೆಗೆ ನಿರ್ಮಿತಿ ಕೇಂದ್ರ ಹೆಚ್ಚು ಒತ್ತು ನೀಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು.

ನಗರದ ಗಣೇಶಪುರದ ಲಕ್ಷ್ಮೀ ಟೇಕ್​ ಹತ್ತಿರ ಹುಡ್ಕೋ ಮತ್ತು ಕರ್ನಾಟಕ ಸರ್ಕಾರದ ಪ್ರೋತ್ಸಾಹಿತ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗಿರುವ ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ನಿರ್ಮಿತಿ ಕೇಂದ್ರ ಜಿಲ್ಲೆಯ ಹಲವು ಪ್ರಮುಖ ಸರ್ಕಾರಿ ಕಟ್ಟಡಗಳನ್ನು ರೂಪಿಸಿದ ಹಿರಿಮೆ ಹೊಂದಿದೆ. ನೂತನ ತಂತ್ರಜ್ಞಾನ ಬಳಸಿ, ಅತೀ ಕಡಿಮೆ ವೆಚ್ಚದಲ್ಲಿ ಅಂದದ ಕಟ್ಟಡಗಳನ್ನು ನಿರ್ಮಿಸಿರುವುದು ಜಿಲ್ಲಾ ನಿರ್ಮಿತಿ ಕೇಂದ್ರದ ವೈಶಿಷ್ಟ್ಯವಾಗಿದೆ ಎಂದರು.

ಶಾಸಕ ಆಸ್​ೀ ಸೇಠ, ವಿಧಾನ ಪರಿಷತ್​ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಕುರಡಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net