ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಿ

15 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೌಶಲದೊಂದಿಗೆ ಜ್ಞಾನವೂ ಅವಶ್ಯಕ. ಯುವತಿಯರು ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ನಿವೃತ್ತ ಕರಕುಶಲ ಶಿಕ್ಷಕಿ ಮಹಾದೇವಿ ಸಂಗಮೇಶ ಕೊಪ್ಪದ ಹೇಳಿದರು.

ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ಜರುಗಿದ ಕಾರ್ಯಕ್ರಮದಲ್ಲಿ ತಮ್ಮ ಸ್ವಂತ ಖರ್ಚಿನಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿ ಅವರು ಮಾತನಾಡಿದರು.

ಉಚಿತ ಹೊಲಿಗೆ ಯಂತ್ರಗಳನ್ನು ಪಡೆದವರು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಬರುವ ಹಣವನ್ನು ವಿದ್ಯಾಭಾಸಕ್ಕೆ ವಿನಿಯೋಗಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಜಂಟಿ ಕಾರ್ಯದರ್ಶಿ ಎಸ್.ಎಂ. ಅಗಡಿ ಮಾತನಾಡಿ, ಸಹಾಯ ಮಾಡುವ ಗುಣ ಎಲ್ಲರಿಗೂ ಬರಬೇಕು. ಉಚಿತ ಹೊಲಿಗೆ ಯಂತ್ರಗಳ ಪಡೆದ ವಿದ್ಯಾರ್ಥಿಗಳು ಮುಂದೆ ತಾವೂ ಸಹಾಯ ಮಾಡುವಷ್ಟು ಬೆಳೆಯಬೇಕು ಎಂದರು.

ವಿದ್ಯಾರ್ಥಿನಿಯರಾದ ಜ್ಯೋತಿ ಜ್ಯೋತಿಬಾ ಮತ್ತು ಗೌರಮ್ಮ ತಿರ್ಲಾಪುರ ಅವರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಸಂಸ್ಥೆಯ ಪ್ರಾಚಾರ್ಯ ಎಸ್.ಎಂ. ಬಮ್ಮನಗೌಡರ, ಕಚೇರಿ ಅಧೀಕ್ಷಕ ಶಿವಲಿಂಗ ನೀಲಗುಂದ, ಜಿ.ಆರ್. ಕೊಡ್ಲಿ, ಸಾವಿತ್ರಿ ಪಾಟೀಲ, ಮಂಜುಳಾ ಪುರದಣ್ಣವರ, ಕವಿತಾ ಪಾಟೀಲ, ಸ್ನೇಹಾ ವಾಲಗಳ್ಳಿ, ಪ್ರಭಾವತಿ ದಾಸರ, ಸಿದ್ದನಗೌಡ ಪಾಟೀಲ, ಮಹಾಂತೇಶ ಮುಲ್ಕಿಪಾಟೀಲ, ನಾಗರಾಜ ಗೊಂದಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net