ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

BLG NEWS 6-1
Published on

ಬೀಳಗಿ: ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ೆ.8 ರಂದು ಚಿಕ್ಕಾಲಗುಂಡಿ ಗ್ರಾಮದಲ್ಲಿ ಹಿರಿಯ ಸಾಹಿತಿ ಹಾಗೂ ಲೇಖಕಿ ಸರೋಜಾ ಇಟ್ಟಣ್ಣವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದೆ. ಮಹಿಳೆಗೆ ಈ ಬಾರಿ ಸಮ್ಮೇಳನದ ಸರ್ವಾಧ್ಯಕ್ಷತೆ ದೊರಕಿರುವುದು ವಿಶೇಷವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ. ಸಾಹುಕಾರ ಹೇಳಿದರು.

ಘಟಪ್ರಭಾ ನದಿ ಪ್ರವಾಹದಲ್ಲಿ ಚಿಕ್ಕಾಲಗುಂಡಿ ಗ್ರಾಮಸ್ಥರು ತೊಂದರೆ ಅನುಭವಿಸಿದರೂ ಅದನ್ನು ಲೆಕ್ಕಿಸದೆ, ಕನ್ನಡ ನಾಡು, ನುಡಿ ಸೇವೆಗಾಗಿ ಮುಂದೆ ಬಂದಿದ್ದು, ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ಗ್ರಾಮಸ್ಥರು ಅಕ್ಷರ ತೇರು ಎಳೆಯುವ ಮೂಲಕ ಸಮ್ಮೇಳನದ ಯಶಸ್ವಿಗೆ ಟೊಂಕಕಟ್ಟಿ ನಿಂತಿದ್ದಾರೆ ಎಂದು ಕುಂದರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಮ್ಮೇಳನಕ್ಕೆ ಆಗಮಿಸುವ ಜನರಿಗೆ ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಸಮ್ಮೇಳನವನ್ನು ಅರ್ಥಪೂರ್ಣಗೊಳಿಸಲು ಬೇಕಾಗುವ ಎಲ್ಲ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮ್ಮೇಳನದ ದಿವಸ ಬೆಳಗ್ಗೆ ಸುಮಂಗಲೆಯ ಕುಂಭ, ಎತ್ತಿನ ಗಾಡಿಗಳು, ವಿವಿಧ ಜಾನಪದ ಕಲಾತಂಡಗಳು, ಶಾಲಾ ಮಕ್ಕಳ ಪಥ ಸಂಚಲನದೊಂದಿಗೆ ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಲಿದೆ ಎಂದರು. ಬಸವರಾಜ ಸ್ವಾಮೀಜಿಯವರು, ಮಾಜಿ ಜಿಪಂ ಅಧ್ಯಕ್ಷ ಕೆಂಪ್ಪಲಿಂಗಣ್ಣವರ, ಮಲ್ಲು ಹೊಳಿ ಅನೇಕರು ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net