

ಚಿಕ್ಕೋಡಿ: ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಶ್ಲಾಘನೀಯ ಎಂದು ದಾಂಡೇಲಿಯ ಗುರು ನಿತ್ಯಾನಂದ ಆಶ್ರಮ ಕಂಚಹಳ್ಳಿಯ ಬಾಬಾನಂದ ಸ್ವಾಮೀಜಿ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪಟ್ಟಣದಲ್ಲಿ ಜೊಲ್ಲೆ ಗ್ರೂಪ್‌ನ ಅಂಗಸಂಸ್ಥೆಯಾದ ಶ್ರೀ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿಯ (ಮಲ್ಟಿ-ಸ್ಟೇಟ್) ೨೩೦ನೇ ಶಾಖೆಯನ್ನು ಈಚೆಗೆ ಉದ್ಘಾಟಿಸಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಹಲವು ಸಂಸ್ಥೆಗಳನ್ನು ಪ್ರಾರಂಭಿಸಿರುವ ಅಣ್ಣಾಸಾಹೇಬ ಜೊಲ್ಲೆ ಅವರು ಒಂದೇ ಸೂರಿನಡಿ ಎಲ್ಲ ವ್ಯವಹಾರಗಳನ್ನು ಗ್ರಾಹಕರಿಗೆ ತಲುಪಿಸಿ ಮೆಚ್ಚುಗೆಗೆ ಪಾತ್ರರಾಗಿರುವುದು ಹೆಮ್ಮೆಯ ವಿಷಯ ಎಂದರು.
ನಗರಸಭೆ ಅಧ್ಯಕ್ಷ ಅಷಾಕ್‌ಅಹ್ಮದ್ ಶೇಖ, ಉಪಾಧ್ಯಕ್ಷೆ ಶಿಲ್ಪಾ ಕೊಡೆ, ನಗರಸಭೆ ಸದಸ್ಯ ಅನಿಲ ದಂಡಗಲ, ಉಪಪ್ರಧಾನ ವ್ಯವಸ್ಥಾಪಕ ಸುರೇಶ ಮಾನೆ, ಶಿವುಪುತ್ರ ಡಬ್ಬ, ಸಹಾಯಕ ಪ್ರಧಾನ ವ್ಯವಸ್ಥಾಪಕ ಶೇಖರ ಪಾಟೀಲ ಇತರರಿದ್ದರು.