

ಸಾಸ್ವೆಹಳ್ಳಿ: ಹೋಬಳಿಯ ಬೀರಗೊಂಡನಹಳ್ಳಿ ಗ್ರಾಮದ ಹೊರವಲಯದ ತುಂಗಭದ್ರಾ ನದಿ ದಡದಲ್ಲಿರುವ ಶ್ರೀ ದಂಗಾಳಿ ಬಸವೇಶ್ವರ ಸ್ವಾಮಿ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನೆರವೇರಿತು.
ಹಿರೇಬಾಸೂರು, ದಿಡಗೂರು, ಬೀರಗೊಂಡನಹಳ್ಳಿ ಗ್ರಾಮಗಳ ಆಂಜನೇಯ ಸ್ವಾಮಿ ಉತ್ಸವಮೂರ್ತಿಗಳು ಪಾಲ್ಗೊಂಡಿದ್ದವು. ಮುಂಜಾನೆ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಬಸವೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಕರೆ ತಂದು ರಥದಲ್ಲಿ ಪ್ರತಿಷ್ಠಾಪಿಸಿ ರಥದ ಚಕ್ರಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ನೆರೆದಿದ್ದ ಭಕ್ತರು ಜಯಘೊಷ ಗಳೊಂದಿಗೆ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.