ಭಿಕ್ಷಾಟನೆ ನಿರತ 11 ಮಕ್ಕಳ ರಕ್ಷಣೆ

begging new
Published on

ಉಡುಪಿ: ಕುಂದಾಪುರದ ಸಂತೆ ಮಾರ್ಕೆಟ್, ಬಸ್ ನಿಲ್ದಾಣಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಶಿರಸಿ ಮತ್ತು ಹಾವೇರಿ ಮೂಲದ 9 ಬಾಲಕಿಯರು, ಇಬ್ಬರು ಬಾಲಕರು ಸೇರಿ ಒಟ್ಟು 11 ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲು ನಿಟ್ಟೂರು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ, ಪರಿಸರ ಅಭಿಯಂತ ರಾಘವೇಂದ್ರ, ಪುರಸಭೆ ಅಧಿಕಾರಿ ಶರತ್, ರಾಘವೇಂದ್ರ ನಾಯ್ಕ್, ಶಿಕ್ಷಣ ಇಲಾಖೆಯ ಅಧಿಕಾರಿ ಅರುಣ್ ಕುಮಾರ್ ಬಿ.ಎನ್, ದೇವ ಕುಮಾರಿ, ಸುನಿತಾ ಬಾನು, ಶಂಕರ್ ಶೆಟ್ಟಿ, ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸದಾಶಿವ ಗವರೋಜಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net