ಮೃತ ರೈತನ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

7ravig6.jpg
Published on

ಬೆಳಗಾವಿ:  ತಮ್ಮ ಹೊಲದಲ್ಲಿ ಕಬ್ಬಿನ ಬೆಳೆಗೆ ಕ್ರಿಮಿನಾಶಕ ಹೊಡೆಯುವ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ಶಾಕ್‌ನಿಂದ ಮೃತಪಟ್ಟಿದ್ದ ಬೆಕ್ಕಿನಕೇರಿ ಗ್ರಾಮದ ಭರಮಾ ಚಿಕ್ಕೆ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾಂತ್ವನ ಹೇಳಿ, 5 ಲಕ್ಷ ರೂ.ಮೊತ್ತ ಪರಿಹಾರದ ಚೆಕ್ ವಿತರಿಸಿದರು.

ಭರಮಾ ಚಿಕ್ಕೆ ಅವರು ಹೊಲದಲ್ಲಿ ಹರಿದು ಬಿದ್ದಿದ್ದ ವಿದ್ಯುತ್ ತಂತಿ ಗಮನಿಸಿದೆ ಸ್ಪರ್ಷಿಸಿದ್ದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇದಾದ ಬಳಿಕ ಅವರ ಪತ್ನಿ ಸಹ ಮಾನಸಿಕ ಅಸ್ವಸ್ಥರಾಗಿ ಮೃತಪಟ್ಟಿದ್ದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರಮಾ ಅವರು ದುರ್ಮರಣಕ್ಕೀಡಾದ ಹಾಗೂ ಅವರ ಪತ್ನಿ ಸಹ ಮಾನಸಿಕ ಅಸ್ವಸ್ಥರಾಗಿ ಮೃತಪಟ್ಟ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವೆನಿಸಿದೆ. ಮೃತರ ಮಕ್ಕಳಿಗೆ ಧೈರ್ಯವನ್ನು ತುಂಬಿ, ಹಾಗೂ ಅವರ ಕಷ್ಟ ನಷ್ಟಗಳಿಗೆ ಸದಾ ಸ್ಪಂದಿಸಲು ಬದ್ಧರಾಗಿದ್ದು ಯಾವುದಕ್ಕೂ ಧೃತಿಗೆಡದಿರುವಂತೆ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net