ಮಾ.2ಕ್ಕೆ ಕೇಂದ್ರ ಸಚಿವ ರಾಜನಾಥ ಸಿಂಗ್‌ ಬೆಳಗಾವಿಗೆ

RAJANATHA SING
Published on

ಬೆಳಗಾವಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೇಯೇ ಬಿಜೆಪಿ ನಾಯಕರ ದಂಡು ಜಿಲ್ಲೆಗೆ ಆಗಮಿಸುತ್ತಿದ್ದು, ಇತ್ತೀಚೆಗೆ ಬಿಜೆಪಿ ಚಾಣಕ್ಯ ಅಮಿತ್‌ ಷಾ ಅವರು ಭೇಟಿ ನೀಡಿದ ಬಳಿಕ, ಇದೇ ಫೆ.27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸಲಿದ್ದು, ಇವರು ಬಂದು ಹೋದ ಬಳಿಕ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರು, ಮಾರ್ಚ್‌ 2 ರಂದು ನಗರಕ್ಕೆ ಭೇಟಿ ನೀಡಲಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಕೈಗೊಂಡಿರುವ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net