ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ

kld 24-1
ಕಲಾದಗಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿದರು. ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ. ಸೌದಾಗರ, ಮುಖಂಡರಾದ ಪಾಂಡು ಪೋಲಿಸ್, ಪಕೀರಪ್ಪ ಮಾದರ ಇತರರಿದ್ದರು.
Published on

ಕಲಾದಗಿ: ಬೆಳಗಾವಿಯಲ್ಲಿ ಡಿ. 27 ರಂದು ನಡೆಯಲಿರುವ ರಾಷ್ಟ್ರೀಯ ಕಾಂಗ್ರೆಸ್ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇಶಾಭಿಮಾನ, ಮಹಾತ್ಮ ಗಾಂಧಿ, ಅಂಬೇಡ್ಕರ್ ಬಗೆಗೆ ಇರುವ ಗೌರವ ಹಾಗೂ ಪಕ್ಷದ ಮೇಲಿನ ಅಭಿಮಾನ ವ್ಯಕ್ತಪಡಿಸಬೇಕೆಂದು ಶಾಸಕ ಜೆ.ಟಿ. ಪಾಟೀಲ ಮನವಿ ಮಾಡಿದರು.

ಗ್ರಾಮದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನೂರು ವರ್ಷದ ಹಿಂದೆ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಐತಿಹಾಸಿಕ ಸಮಾವೇಶ ನಡೆದಿತ್ತು. ಈಗ ನಡೆಯಲಿರುವ ಸಮಾವೇಶದ ಅಧ್ಯಕ್ಷತೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸುತ್ತಿರುವುದು ಇಡೀ ರಾಜ್ಯವೇ ಹೆಮ್ಮೆಪಡುವಂತದ್ದಾಗಿದೆ ಎಂದು ತಿಳಿಸಿದರು.

ಇದು ಕೇವಲ ಕಾಂಗ್ರೆಸ್ ಪಕ್ಷಕ್ಕಷ್ಟೆ ಸೀಮಿತವಲ್ಲ. ಮಹಾತ್ಮ ಗಾಂಧೀಜಿ ಸೇರಿ ಎಲ್ಲ ಸ್ವಾತಂತ್ರೃಸೇನಾನಿಗಳನ್ನು ನೆನಪಿಸಿಕೊಂಡು ಗೌರವಿಸುವ ಅಪರೂಪದ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರಲ್ಲದೆ, ಪಕ್ಷದ ಮುಖಂಡರು ಸಮಾವೇಶದಲ್ಲಿ ಹೆಚ್ಚಿನ ಜನ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ. ಸೌದಾಗರ ಮಾತನಾಡಿ, ಸ್ವಾತಂತ್ರೃ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷದ ಅಭಿಮಾನದ ಕಾರ್ಯಕ್ರಮವಿದು. ಉತ್ತಮ ವಿಚಾರಗಳಿಂದ ಪ್ರೇರೇಪಿತರಾಗಲು ಸಮಾವೇಶದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಗ್ರಾಪಂ ಉಪಾಧ್ಯಕ್ಷ ಪಕೀರಪ್ಪ ಮಾದರ, ಕಲಾದಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಸಂಶಿ, ಎಸ್‌ಸಿ ಘಟಕದ ಅಧ್ಯಕ್ಷ ಹನುಮಂತ ಡೋಣಿ, ಅಂಜುಮನ್ ಸಂಸ್ಥೆ ಅಧ್ಯಕ್ಷ ರಫೀಕ್‌ಸಾಬ ಬೇಪಾರಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ. ತೇಲಿ, ಮುಖಂಡರಾದ ಸಲೀಂಶೇಖ, ಕೆ.ಟಿ. ಪಾಟೀಲ, ಪಾಂಡು ಪೊಲೀಸ್, ಹಸನ್ಮದ ರೋಣ, ಗಿರೀಶ ನಾಡಗವಡ, ಹನುಮಂತ ಅರಕೇರಿ ಇದ್ದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮೀತ್ ಷಾ ವಿರುದ್ಧ ಜ.1 ರಂದು ಬೀಳಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಶಾಸಕ ಜೆ.ಟಿ. ಪಾಟೀಲ ತಿಳಿಸಿದರು.

ಅಲ್ಲದೆ, ಸಿ.ಟಿ. ರವಿ ಅವರು ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಹೇಳನವಾಗಿ ಮಾತನಾಡಿದ್ದು ಖಂಡನೀಯ ಎಂದರಲ್ಲದೆ, ಮೋದಿ, ಷಾ ಇರುವವರೆಗೂ ಯಾರಿಗೂ ಸ್ವಾತಂತ್ರೃವಿಲ್ಲ. ಅವರ ಹಿಡಿತದಲ್ಲಿ ದೇಶದ ವ್ಯವಸ್ಥೆಗಳು ಹಾಳಾಗುತ್ತಿವೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net