ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಮುಂದಾದ ದಂಪತಿ: ಆದರೆ, ವಿಧಿಯಾಟವೇ ಬೇರೆ ಇತ್ತು!

Belagavi Couple
Published on

ಬೆಳಗಾವಿ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ದಂಪತಿಯಲ್ಲಿ ಪತಿ ಮೃತಪಟ್ಟರೆ, ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಬೆಳಗಾವಿ ನಗರದ ಒಂದನೇ ರೈಲ್ವೆ ಗೇಟ್ ಬಳಿ ಘಟನೆ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದರು. ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಸಾವಿಗೀಡಾದರೆ, ಪತ್ನಿ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ರಾತ್ರಿ ಕುಟುಂಬದ ಸದಸ್ಯರ ಜತೆ ಜಳವಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ನಿರ್ಧರಿಸಿದ್ದರು. ಆದರೆ, ವಿಧಿಯಾಟದಲ್ಲಿ ಪತ್ನಿ ಬದುಕುಳಿದಿದ್ದು, ಪತಿ ಇಹಲೋಕ ತ್ಯಜಿಸಿದ್ದಾರೆ. ಇದೀಗ ಪತಿ ಕಳೆದುಕೊಂಡ ಪತ್ನಿಯ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಘಟನಾ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net