

ಬೆಳಗಾವಿ:ಘನತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಡಲೇ ಟೆಂಡರ್ ಕರೆದು ಕೆಲಸ ಆರಂಭಿಸಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ತಕ್ಷಣವೇ ಬಿಲ್ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎನ್.ಜಿ.ಟಿ. ಮಾರ್ಗಸೂಚಿ ಪ್ರಕಾರ ತ್ಯಾಜ್ಯ ಸಂಗ್ರಹ, ವರ್ಗೀಕರಣ ಮತ್ತು ವಿಲೇವಾರಿ ಪ್ರಕ್ರಿಯೆಯನ್ನು ನಡೆಸಬೇಕು.
ಅಕ್ಕಪಕ್ಕದ ಸ್ಥಳೀಯ ಸಂಸ್ಥೆಗಳು ಕ್ಲಸ್ಟರ್ ಮಾಡಿಕೊಂಡು ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಬೇಕು. ಒಂದು ವೇಳೆ ಗ್ರಾಮ ಪಂಚಾಯತಿ ಜಾಗೆ ಲಭ್ಯವಿದ್ದರೆ ಅವರೊಂದಿಗೂ ಸೇರಿ ಕ್ಲಸ್ಟರ್ ಸ್ಥಾಪಿಸಬಹುದು ಎಂದು ಜಿಲ್ಲಾಧಿಕಾರಿ ಪಾಟೀಲ ಸಲಹೆ ನೀಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ..
ಎನ್.ಜಿ.ಟಿ. ಮಾರ್ಗಸೂಚಿ ಪಾಲನೆಗೆ ಸಂಬಂಧಿಸಿದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.
ಬೆಳಗಾವಿ ಉಪ ವಿಭಾಗಾಧಿಕಾರಿ ಬಲರಾಮ್ ಚವಾಣ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಎಂಜಿನಿಯರ್ ಗಳು ಪಾಲ್ಗೊಂಡಿದ್ದರು.