

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಶತಮಾನೋತ್ಸವ ಭವನ ಮತ್ತು ನೂತನ ಕಟ್ಟಡದ ಉದ್ಘಾಟನೆ ಸಮಾರಂಭವನ್ನು ಕರೊನಾ ಹಿನ್ನೆಲೆಯಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು. ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪ ಹಾಗೂ ಹಳೇ ಪಿಬಿ ರಸ್ತೆಯಲ್ಲಿ ಶತಮಾನೋತ್ಸವ ನಿಮಿತ್ತ ನಿರ್ಮಾಣವಾದ ಬ್ಯಾಂಕ್‌ನ ಹೊಸ ಕಟ್ಟಡ ಉದ್ಘಾಟಿಸಲಾಯಿತು. ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಮುರಗೋಡ ನೀಲಕಂಠ ಸ್ವಾಮೀಜಿ, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ ಕತ್ತಿ, ಉಪಾಧ್ಯಕ್ಷ ಸುಧಾಕರ ಢವಳೇಶ್ವರ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ, ರಾಜು ಅಂಕಲಗಿ ಹಾಗೂ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಇದ್ದರು. ಬ್ಯಾಂಕ್‌ನಲ್ಲಿ ಏಳು ಮಹಡಿಗಳಿದ್ದು, ವಾತಾನುಕೂಲ ಕಚೇರಿಯೊಂದಿಗೆ ಅತ್ಯಾಧುನಿಕ ಸೌಲಭ್ಯ ಹೊಂದಿದೆ. ಸುಮಾರು 30 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.