ಬರಗಾಲ ಘೋಷಿಸಿ ಸಾಲಮನ್ನಾ ಮಾಡಲು ರೈತ ಸಂಘದಿಂದ ಸರ್ಕಾರಕ್ಕೆ ಮನವಿ

IMG-20230711-WA0022.jpg
Published on

ಬೆಳಗಾವಿ : ಕರ್ನಾಟಕವನ್ನು ಬರಪೀಡಿತ ರಾಜ್ಯ ಎಂದು ಘೋಷಿಸುವುದು ಹಾಗೂ ರೈತರ ಸಾಲ ಮನ್ನಾ ಮಾಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೂಲಿ ಕರ್ಮಿಕರ ಹಿತಾಸಕ್ತಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರಿಗೆ ಮನವಿ ರವಾನಿಸಲಾಯಿತು.

ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟಿಸಿದ ರೈತರ ಮುಖಂಡರು, ಅತಿವೃಷ್ಟಿ-ಅನಾವೃಷ್ಟಿ ಪರಿಣಾಮ ಕಳೆದ ಹತ್ತು ಹಲವು ವರ್ಷಗಳಿಂದ ರೈತರಿಗೆ ನಷ್ಟ ಸಂಭವಿಸಿತ್ತು. ಈ ಭಾರಿಯಾದರು ಉತ್ತಮ ಮಳೆಯಿಂದ ಬೆಳೆ ಬಂದೀತು ಎಂದು  ಸಾಲಮಾಡಿ ರಸಗೊಬ್ಬರ, ಬಿತ್ತನೆ ಬೀಜಗಳ ಖರೀದಿಸಿ ಮನೆಯಲ್ಲಿ ಸಂಗ್ರಹಿಸಿಟ್ಟರೆ ಮುಂಗಾರು ಮಳೆ ಕರ್ನಾಟಕದಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು. ಇದರಿಂದಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನು ಕರ್ನಾಟಕ ರಾಜ್ಯವನ್ನು ಬರ ಪೀಡಿತ ರಾಜ್ಯವನ್ನಾಗಿ ಘೋಷಿಸಬೇಕು. ರೈತರ ಜಮೀನುಗಳ ಆಧಾರದ ಮೇಲೆ ಪ್ರತಿ ಎಕರೆಗೆ 50ಸಾವಿರ ರೂಪಾಯಿ ಪರಿಹಾರ ನೀಡಬೇಕು. ಕೇಂದ್ರ ಸರ್ಕಾರದ ನರೇಗಾ ಯೋಜನೆಯಲ್ಲಿ ಎಲ್ಲ ರೈತರಿಗೆ ವುತಿ ಏಕರೆಗೆ ಕನಿಷ್ಟ 50 ಕೂಲಿ ಕಾರ್ಮಿಕರನ್ನು ಒದಗಿಸುವ ಕಾಯ್ದೆ ಜಾರಿಗೊಳಿಸಬೇಕು.  ಕಬ್ಬು ಬೆಳೆಯ ಎಫ್‌ಆರ್‌ಪಿ ದರ ಕನಿಷ್ಠ ಸಾವಿರ ರೂ.ಗೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಬಿ.ಎಂ.ಚಿಕ್ಕಮಠ, ಎನ್.ಎಸ್.ಪಾಟೀಲ, ಪಿ.ಯು.ಬಳಿಗೇರ ಸೇರಿದಂತೆ ಇತರರಿದ್ದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರೈತ ಮುಖಂಡರಾದ ಬಿ.ಎಂ.ಚಿಕ್ಕಮಠ, ಎನ್.ಎಸ್.ಪಾಟೀಲ, ಪಿ.ಯು.ಬಳಿಗೇರ ಸೇರಿದಂತೆ ಇತರರಿದ್ದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರೈತ ಮುಖಂಡರಾದ ಬಿ.ಎಂ.ಚಿಕ್ಕಮಠ, ಎನ್.ಎಸ್.ಪಾಟೀಲ, ಪಿ.ಯು.ಬಳಿಗೇರ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net