

ಬೆಳಗಾವಿ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ನಾಯಕರು ಗೆಲುವಿಗಾಗಿ ಜಿಲ್ಲೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದಾತೆ ಎಂದು ಆಮ್ ಆದ್ಮಿ ಪಾರ್ಟಿಯ ಉತ್ತರ ಮತಕ್ಷೇತ್ರದ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ದೂರಿದರು.
ಮಂಗಳವಾರ ಕೊಲ್ಲಾಪುರ ವೃತ್ತದಿಂದ ತಮ್ಮ ಅಪಾರ ಅಭಿಮಾನಿಗಳು, ಆಪ್ ಕಾರ್ಯಕರ್ತರೊಂದಿಗೆ ಪಾಲಿಕೆಗೆ ತೆರಳಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಳಗಾವಿ ಬುಡಾದಲ್ಲಿಯೂ ಸಾಕಷ್ಟು ಭ್ರಷ್ಟಾಚಾರವಾಗಿದೆ. ಕಳೆದ ವಾರ ಕಣಬರಗಿ ಹೊಸ ಬಡಾವಣೆ ರದ್ದು ಮಾಡಿದ್ದಾರೆ. ಕೆಲವೇ ಕೆಲವರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ. ನಾನು ಹೋರಾಟದ ಮೂಲಕವೇ ಜನರ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿದ್ದೇನೆ. ರಾಣಿಚನ್ನಮ್ಮ ವಿಶ್ವ ವಿದ್ಯಾಲಯ ತರಲು ನಿರಂತರವಾಗಿ ಹೋರಾಟ ಮಾಡಿದ್ದೇನೆ. ಇದನ್ನು ಯುವಕರು ತಿಳಿದುಕೊಳ್ಳಬೇಕು. ಒಂದು ಬಾರಿ ನನಗೆ ಅವಕಾಶ ಕೊಟ್ಟರೆ ಬೆಳಗಾವಿ ನಗರವನ್ನು ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದರು.
ಆಮ್ ಆದ್ಮಿ ಜಿಲ್ಲಾಧ್ಯಕ್ಷ ಶಂಕರ ಹೆಗಡೆ, ಶಿವಾನಂದ ಕಾರಿ, ಸುನೀತಾ ಪಾಟೀಲ, ವಿಜಯ ಪಾಟೀಲ, ಜುನೈದ್ ಖಾನ್ ಸೇರಿದಂತೆ ಇತರರಿದ್ದರು.