

ಬೆಳಗಾವಿ : ರಾಯಬಾಗದ ಶ್ರೀಹೀರಾಬಾಯಿ ಭರಮ ಚೌಗುಲೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳಗಾವಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮಲ್ಲಿಕಾರ್ಜುನ ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಡಾ.ಪಿ.ಜಿ.ಹಳಕಟ್ಟಿ ಜನ್ಮೋತ್ಸವ ವಚನ ಸಾಹಿತ್ಯ ಸಂಶೋಧನ ಶತಮಾನೋತ್ಸವ ಆಚರಣೆ ಪ್ರಯುಕ್ತ ಏರ್ಪಡಿಸಿದ್ದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ 30 ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ‘ಶಿಕ್ಷಣ ಮತ್ತು ಸಮಾಜಕ್ಕೆ ಡಾ.ಪಿ.ಜಿ.ಹಳಕಟ್ಟಿಯವರ ಕೊಡುಗೆ’ ವಿಷಯವಾಗಿ ಮಲ್ಲಿಕಾರ್ಜುನ ಪೂಜಾರಿ ವಿಷಯ ಮಂಡಿಸಿ, ತೃತೀಯ ಬಹುಮಾನ ಪಡೆದಿದ್ದಾರೆ.
ವಿದ್ಯಾರ್ಥಿ ಸಾಧನೆಗೆ ಆರ್.ಎಲ್. ಕಾನೂನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್. ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಎಚ್. ಹವಾಲ್ದಾರ್, ಪ್ರೊ.ಮಾಧುರಿ ಕುಲಕರ್ಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.