

ಬೆಳಗಾವಿ : ಆರ್ಥಿಕ, ಸಾಮಾಜಿಕ ಸಮಾನತೆ, ಬಾಂಧವ್ಯ, ದೇಶದ ಏಕತೆಗೆ ಸಂವಿಧಾನ ಅಡಿಪಾಯವಾಗಿದೆ. ಮುಂದಿನ ದಿನಗಳಲ್ಲಿ ಸಂವಿಧಾನದ ಕುರಿತು ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಲಾಗುವುದು ಎಂದು ಜಿ.ಪಂ ಸಿ.ಇ.ಓ ಹರ್ಷಲ್ ಭೋಯರ್ ಅವರು ತಿಳಿಸಿದರು.
ನಗರದಲ್ಲಿ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಏಕತೆ ಸಾರುವ ಭಾರತದ ಮೂಲ ಗ್ರಂಥ ಸಂವಿಧಾನ ಎಂದರು.
ಇದಕ್ಕೂ ಮುಂಚೆ ರಾಜ್ಯಾದ್ಯಂತ ಏಕಕಾಲದಲ್ಲಿ ವಿಡಿಯೋ ಸಂವಾದದ ಮೂಲಕ ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಪ್ರಿಯಾ ಕಡೇಚೂರು, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ್ ಮಿರಜನ್ನವರ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ರಾಯವ್ವಗೊಳ, ಸಮಾಜದ ಮುಖಂಡರಾದ ಮಲ್ಲೇಶ ಚೌಗಲಾ, ಮಲ್ಲೇಶ ಕುರಂಗಿ, ಯಲ್ಲಪ್ಪ ಹುದಲಿ ಉಪಸ್ಥಿತರಿದ್ದರು