ಜಗತ್ತಿಗೆ ಮಾದರಿಯಾದ ಕೆಎಲ್‌ಇ

ಕೆಎಲ್‌ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿ ಹಾಗೂ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕೆಎಲ್‌ಇ ಸಂಸ್ಥೆಯ ೧೧೦ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಎಚ್.ಕೆ.ಗುರವ ಅವರನ್ನು ಸನ್ಮಾನಿಸಲಾಯಿತು.
ಕೆಎಲ್‌ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿ ಹಾಗೂ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕೆಎಲ್‌ಇ ಸಂಸ್ಥೆಯ ೧೧೦ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಎಚ್.ಕೆ.ಗುರವ ಅವರನ್ನು ಸನ್ಮಾನಿಸಲಾಯಿತು.
Published on
ರಾಯಬಾಗ: ಕೆಎಲ್‌ಇ ಸಂಸ್ಥೆಯ ಸಪ್ತರ್ಷಿಗಳ ಬದುಕು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದ್ದು, ಅವರು ಸ್ಥಾಪಿಸಿದ ಸಂಸ್ಥೆ ಇಂದು ಜಗತ್ತಿಗೆ ಮಾದರಿಯಾಗಿದೆ ಎಂದು ಧಾರವಾಡ ಆರ್‌ಎಲ್‌ಎಸ್ ಕಾಲೇಜು ನಿವೃತ್ತ ಉಪನ್ಯಾಸಕ ಎಚ್.ಕೆ.ಗುರವ ಹೇಳಿದರು.
ಪಟ್ಟಣದ ಕೆಎಲ್‌ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿ ಹಾಗೂ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೆಎಲï‌ಇ ಸಂಸ್ಥೆಯ ೧೧೦ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನವನ್ನು ಕೇವಲ ಉಪಜೀವನಕ್ಕೆ ಬಳಸದೆ ಸಮಾಜಮುಖಿಯಾಗಿ ಪರಿವರ್ತಿಸಿಕೊಳ್ಳಬೇಕು. ಶರಣರು ಹಾಕಿಕೊಟ್ಟ ಮೌಲ್ಯ, ವಿಚಾರಗಳನ್ನು ಬದುಕಿನ ಉದ್ದಕ್ಕೂ ಪಾಲಿಸಿಕೊಂಡು ಬರಬೇಕು ಎಂದರು. 
ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಕೆ.ಪಾಟೀಲ, ಸ್ಥಳೀಯ ಆಡಳಿತ ಮಂಡಳಿ ಸದಸ್ಯರಾದ ಎಂ.ಎಂ.ನಿಶಾನದಾರ, ಡಿ.ಎಲ್.ಮಿರ್ಜೆ, ವಿ.ಪಿ.ಪಾಟೀಲ, ಎಲ್.ಬಿ.ಪಾಟೀಲ, ಉಪನ್ಯಾಸಕರಾದ ಎಸ್.ಬಿ.ಗಸ್ತಿ, ಎ.ಜಿ.ಹಂಜೆ, ಪಿ.ಪಿ.ಪವಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net